ಉಡುಪಿ: ಬೆಂಕಿ ತಗುಲಿ ಸುಟ್ಟು ಕರಕಲಾದ ಖಾಸಗಿ ಬಸ್ !

Prasthutha|

ಉಡುಪಿ: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿ ಖಾಸಗಿ ಬಸ್ಸೊಂದು ಸುಟ್ಟು ಕರಕಲಾದ ಘಟನೆ ಮಣಿಪಾಲದ ಟೈಗರ್ ಸರ್ಕಲ್ ಬಳಿ ಬುಧವಾರ ಬೆಳಿಗ್ಗೆ ನಡೆದಿದೆ.

- Advertisement -

ಖಾಸಗಿ ಬಸ್ ಬಳ್ಳಾರಿಯ ಕೊಟ್ಟೂರಿನಿಂದ ಮಂಗಳೂರಿಗೆ ಆಗಮಿಸುತ್ತಿತ್ತು. ಮಣಿಪಾಲದ ಟೈಗರ್ ಸರ್ಕಲ್ ಬಳಿ ಬರುತ್ತಿದ್ದಂತೆ ಬಸ್ಸಿನಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾದ ಪರಿಣಾಮ ಬೆಂಕಿ ಕಾಣಿಸಿಕೊಂಡಿದೆ.

ಬೆಂಕಿ ಕಾಣಿಸಿಕೊಂಡ ತಕ್ಷಣ ಪ್ರಯಾಣಿಕರನ್ನು ಕೆಳಕ್ಕೆ ಇಳಿಸಲಾಯಿತು. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

Join Whatsapp