ಕಟೀಲು ದೇವಸ್ಥಾನದ ಮುಂಭಾಗದಲ್ಲಿ ಧಗಧಗನೇ ಹೊತ್ತಿ ಉರಿದ ಖಾಸಗಿ ಬಸ್

Prasthutha|

ಮಂಗಳೂರು : ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗದಲ್ಲಿ ಖಾಸಗಿ ಬಸ್ಸೊಂದು ಧಗಧಗನೇ ಹೊತ್ತಿ ಉರಿದಿದ್ದು, ಘಟನೆಯಲ್ಲಿ ಪ್ರಯಾಣಿಕರು ಹಾಗೂ ಬಸ್ ಚಾಲಕ ಅಪಾಯದಿಂದ ಪಾರಾಗಿದ್ದಾರೆ.

- Advertisement -

ಇಂದು ಮಧ್ಯಾಹ್ನ 2.30 ರ ಸುಮಾರಿಗೆ ಗೋಲ್ಡನ್ ಟ್ರಾವೆಲ್ಸ್ ಎಂಬ ಹೆಸರಿನ ಬಸ್ ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ. ದೇವಸ್ಥಾನದ ಮುಂಭಾಗವೇ ಬೆಂಕಿ ಹೊತ್ತಿಕೊಂಡಿದ್ದು, ಈ ವೇಳೆ ಬಸ್ ನಲ್ಲಿ ಇಬ್ಬರು ಮಹಿಳೆಯರು ಮತ್ತು ಬಸ್ ಚಾಲಕ ಇದ್ದರು ಎಂದು ತಿಳಿದುಬಂದಿದೆ.

ಬಸ್ಸಿಗೆ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ತಗುಲಿರಬಹುದು ಎನ್ನಲಾಗುತ್ತಿದೆ. ಘಟನೆ ವೇಳೆ ಸ್ಥಳದಲ್ಲಿ ನೀರು ಸರಬರಾಜು ಮಾಡುವ ಟ್ಯಾಂಕರ್ ಇದ್ದ ಕಾರಣ ಕೂಡಲೇ ಬೆಂಕಿಯನ್ನು ನಂದಿಸಲಾಗಿದೆ. ಬಳಿಕ ಅಗ್ನಿ ಶಾಮಕದಳದವರು ಹರಸಾಹಸ ಪಟ್ಟು‌ ಬೆಂಕಿ ನಂದಿಸಲು ಯಶಸ್ವಿಯಾಗಿದ್ದಾರೆ.

Join Whatsapp