Home ಟಾಪ್ ಸುದ್ದಿಗಳು ಕಣಿವೆಗೆ ಬಿದ್ದ ಖಾಸಗಿ ಬಸ್​: 7 ಪ್ರಯಾಣಿಕರು ಮೃತ್ಯು

ಕಣಿವೆಗೆ ಬಿದ್ದ ಖಾಸಗಿ ಬಸ್​: 7 ಪ್ರಯಾಣಿಕರು ಮೃತ್ಯು

ಉತ್ತರಾಖಂಡ್‌: ಖಾಸಗಿ ಬಸ್ ಕಣಿವೆಗೆ ಬಿದ್ದು 7 ಪ್ರಯಾಣಿಕರು ಸಾವನ್ನಪ್ಪಿರುವಂತಹ ಘಟನೆ ಉತ್ತರಕಾಶಿ ಜಿಲ್ಲೆಯ ಗಂಗೋತ್ರಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

35 ಪ್ರಯಾಣಿಕರೊಂದಿಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿ ಅವಘಡ ಸಂಭವಿಸಿದ್ದು, 27ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿವೆ. ಸದ್ಯ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮೂಲಗಳ ಪ್ರಕಾರ, 35 ಪ್ರಯಾಣಿಕರಿದ್ದ ಖಾಸಗಿ ಬಸ್ ಗಂಗೋತ್ರಿಯಿಂದ ಉತ್ತರಕಾಶಿ ಕಡೆಗೆ ಹೋಗುತ್ತಿದ್ದಾಗ ಸಂಜೆ 4.05 ಕ್ಕೆ ಆಳವಾದ ಕಣಿವೆಗೆ ಬಿದ್ದಿದೆ ಎನ್ನಲಾಗುತ್ತಿದೆ.

ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯರು ಪೊಲೀಸರು ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ರಕ್ಷಣಾ ಕಾರ್ಯಾಚರಣೆಗೆ ಮುಂದಾಗಿದ್ದಾರೆ. ಸದ್ಯ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು, ಆಂಬುಲೆನ್ಸ್‌ಗಳು ಮತ್ತು ಎಸ್‌ಡಿಆರ್‌ಎಫ್ ಮತ್ತು ಎನ್‌ಡಿಆರ್‌ಎಫ್ ಸಿಬ್ಬಂದಿಗಳು ಧಾವಿಸಿದ್ದು, ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

Join Whatsapp
Exit mobile version