ಜು.27ರಂದು ಖಾಸಗಿ ಬಸ್, ಟ್ಯಾಕ್ಸಿ, ಆಟೋ ಸಂಘಟನೆಗಳಿಂದ ಬಂದ್’ಗೆ ಕರೆ

Prasthutha|

ಬೆಂಗಳೂರು: ಶಕ್ತಿ ಯೋಜನೆಯಿಂದಾಗಿ ಖಾಸಗಿ ಬಸ್ ಮಾಲೀಕರು, ಸಿಬ್ಬಂದಿ ಜೊತೆಗೆ ಆಟೋರಿಕ್ಷಾಗಳಿಗೂ ಬಾಡಿಗೆ ಸಿಗುತ್ತಿಲ್ಲ ಎಂದು ಆಟೋ ಚಾಲಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಖಾಸಗಿ ಬಸ್, ಟ್ಯಾಕ್ಸಿ ಮತ್ತು ಆಟೋ ಸಂಘಟನೆಗಳು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಲು ಜುಲೈ 27 ರಂದು ಬಂದ್ ಗೆ ಮುಂದಾಗಿವೆ.

- Advertisement -


ಹೀಗಾಗಿ ಜುಲೈ 26ರ ಮಧ್ಯರಾತ್ರಿ 12 ರಿಂದ 27ರ ಮಧ್ಯರಾತ್ರಿ 12 ರ ವರೆಗೆ ಓಲಾ, ಉಬರ್, ಆಟೋ ಕ್ಯಾಬ್ ಹಾಗೂ ಖಾಸಗಿ ಬಸ್ ಸಂಚಾರ ಸ್ಥಗಿತ ವಾಗಲಿದೆ.
ಜುಲೈ 27ರಂದು ಬೆಳಿಗ್ಗೆ 11 ಗಂಟೆಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್ ವರೆಗೆ ಬೃಹತ್ ಜಾಥಾ ನಡೆಸುವ ಮೂಲಕ ಸರ್ಕಾರ ಗಮನ ಸೆಳೆಯಲು ರ್ನಾಟಕ ರಾಜ್ಯ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ತೀರ್ಮಾನಿಸಿದೆ. ಈ ಹಿನ್ನೆಲೆಯಲ್ಲಿ ಇಂದು(ಜುಲೈ 20) ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ 12 ಗಂಟೆಗೆ ಕರ್ನಾಟಕ ರಾಜ್ಯ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ಸುದ್ದಿಗೋಷ್ಠಿ ಕರೆದಿದ್ದು, ಬಂದ್ ಬಗ್ಗೆ ವಿವರವಾಗಿ ತಿಳಿಸಲಿದೆ. ಈ ಸುದ್ದಿಗೋಷ್ಟಿಯಲ್ಲಿ ಆಟೋ,ಕ್ಯಾಬ್, ಟ್ಯಾಕ್ಸಿ, ಓಲಾ,ಉಬರ್ ಹಾಗೂ ಖಾಸಗಿ ಬಸ್ ಸೇರಿದಂತೆ 23 ಸಂಘಟನೆಗಳು ಭಾಗಿಯಾಗಲಿದ್ದಾರೆ.

Join Whatsapp