ಕಾಸರಗೋಡು: ಬಸ್ ಪ್ರಯಾಣ ದರ ಏರಿಕೆ ಸೇರಿದಂತೆ ಹಲವು ಬೇಡಿಕೆಗಳ ನ್ನು ಮುಂದಿಟ್ಟುಕೊಂಡು ಕೇರಳದಲ್ಲಿ ಇಂದಿನಿಂದ ಖಾಸಗಿ ಬಸ್ಸು ಮಾಲಕರು ಅನಿರ್ಧಿಷ್ಟಾವಧಿ ಮುಷ್ಕರ ಆರಂಭಿಸಿದ್ದು,ಕೇರಳದಲ್ಲಿ ಖಾಸಗಿ ಬಸ್ಸು ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.
ಬಸ್ ಪ್ರಯಾಣ ದರವನ್ನು ಕನಿಷ್ಠ 12 ರೂ.ಗೆ ಹೆಚ್ಚಿಸಬೇಕು ವಿದ್ಯಾರ್ಥಿಗಳ ರಿಯಾಯಿತಿ ದರವನ್ನು 6 ರೂ.ಗೆ ಏರಿಕೆ ಮಾಡಬೇಕು ಮೊದಲಾದ ಹಲವಾರು ಬೇಡಿಕೆಗಳನ್ನು ಮುಂದಿಟ್ಟು ಕೊಂಡು ಮುಷ್ಕರ ಆರಂಭಿಸಿದ್ದಾರೆ.
ಕಳೆದ ನವೆಂಬರ್ ನಲ್ಲಿ ಮುಷ್ಕರ ಘೋಷಿಸಿದ್ದರೂ ಸಾರಿಗೆ ಸಚಿವರು ನೀಡಿದ ಭರವಸೆ ನೀಡಿದ್ದರೂ ಈಡೇರಿಸದ ಹಿನ್ನಲೆಯಲ್ಲಿ ಇಂದಿನಿಂದ ಮುಷ್ಕರ ಆರಂಭಿಸಿದ್ದಾರೆ. ತಮ್ಮ ಭರವಸೆ ಈಡೆರುವವರೆಗೂ ಮುಷ್ಕರ ಮುಂದುವರಿಸಲಾಗುವುದು ಎಂದು ಖಾಸಗಿ ಬಸ್ ಮಾಲಕರು ತಿಳಿಸಿದ್ದಾರೆ.ಗ್ರಾಮೀಣ ಪ್ರದೇಶದ ಜನ ಸಾಮಾನ್ಯರು ಮುಷ್ಕರದಿಂದ ತೊಂದರೆ ಅನುಭವಿಸುವಂತಾಗಿದೆ.