ಇಂದು ಮಧ್ಯರಾತ್ರಿಯಿಂದ ಬೆಂಗಳೂರಲ್ಲಿ ಖಾಸಗಿ ಸಾರಿಗೆ ಸೇವೆ ಬಂದ್​: 36 ಸಂಘಟನೆಗಳು ಬೆಂಬಲ

Prasthutha|

ಬೆಂಗಳೂರು: ಖಾಸಗಿ ಸಾರಿಗೆ ಒಕ್ಕೂಟದ ಬಂದ್​ ಕರೆಗೆ 36 ಖಾಸಗಿ ಸಾರಿಗೆ ಸಂಘಟನೆಗಳು ಬೆಂಬಲ ನೀಡಿವೆ. ಇಂದು ಭಾನುವಾರ ಮಧ್ಯರಾತ್ರಿ 12 ಗಂಟೆಯಿಂದ ಸೋಮವಾರ ಮಧ್ಯರಾತ್ರಿ 12ರವರೆಗೆ ಖಾಸಗಿ ಸಾರಿಗೆಗಳು ಬೆಂಗಳೂರಲ್ಲಿ ಸಂಚರಿಸುವುದಿಲ್ಲ.

- Advertisement -

ನಾಳೆ ಬೆಳಗ್ಗೆ 10 ಗಂಟೆಗೆ ನಗರದ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ (KSR) ಫ್ರೀಡಂಪಾರ್ಕ್​​ವರೆಗೆ ರ್ಯಾಲಿ ನಡೆಸುತ್ತೇವೆ. ಪ್ರತಿಭಟನೆಗೆ ಖಾಸಗಿ ಬಸ್​​ಗಳ​ ಮಾಲೀಕರು ಆಗಮಿಸಲಿದ್ದಾರೆ ಎಂದು ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ನಟರಾಜ್ ಶರ್ಮಾ ಹೇಳಿದರು.

ಬೆಂಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಪ್ರತಿಭಟನೆಗೆ ರಾಮನಗರ, ಮೈಸೂರು, ಕನಕಪುರ, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ಹುಬ್ಬಳ್ಳಿ-ಧಾರವಾಡ, ಬಾಗಲಕೋಟೆಯಿಂದ ಖಾಸಗಿ ಬಸ್ ಮಾಲೀಕರು ತಮ್ಮ ತಮ್ಮ ಬಸ್ಸುಗಳ ಮೂಲಕ ಬರುತ್ತಿದ್ದಾರೆ. ಬೆಂಗಳೂರಿನ ಮೂಲೆ ಮೂಲೆಗಳಿಂದ, ಎಲೆಕ್ಟ್ರಾನಿಕ್ ಸಿಟಿ, ನೆಲಮಂಗಲ, ಕೆಂಗೇರಿ, ಹೆಬ್ಬಾಳ, ಕೆ.ಆರ್ ಪುರಂ, ಚಾಲಕರು ಬರುತ್ತಿದ್ದಾರೆ. ಈ ರ್ಯಾಲಿಯಲ್ಲಿ 3 ರಿಂದ 5 ಸಾವಿರ ಜನರು ಸೇರುಸುತ್ತೇವೆ. ಸೋಮವಾರ 7 ರಿಂದ 10 ಲಕ್ಷ ವಾಹನಗಳು ಸಂಚಾರ ಮಾಡಲ್ಲ ಎಂದು ತಿಳಿಸಿದರು.

- Advertisement -

ವೈಟ್​ ಬೋರ್ಡ್​​ನಲ್ಲಿ ಬಾಡಿಗೆ ಹೊಡೆಯಲಾಗುತ್ತಿದೆ. ಶಕ್ತಿ ಯೋಜನೆಯಿಂದ ನಮಗೆ ದೊಡ್ಡ ಮಟ್ಟದಲ್ಲಿ ಹೊಡೆತ ಆಗಿದೆ. ರ್ಯಾಪಿಡೋ ಬೈಕ್​​ ಟ್ಯಾಕ್ಸಿಯಿಂದಲೂ ನಮಗೆ ತುಂಬಾ ಸಮಸ್ಯೆ ಆಗಿದೆ ಇದನ್ನು ಸರ್ಕಾರ ನಿಲ್ಲಿಸಬೇಕು. ಇಂದು ರಾತ್ರಿಯೊಳಗೆ ಸಚಿವರು ಲಿಖಿತ ರೂಪದಲ್ಲಿ ಬೇಡಿಕೆ ಈಡೇರಿಸಿದರೇ ಬಂದ್​ ಹಿಂಪಡೆಯುತ್ತೇವೆ ಎಂದು ತಿಳಿಸಿದರು.

Join Whatsapp