►‘ಸವಾಲನ್ನು ಸ್ವೀಕರಿಸುವ ದಮ್ಮು, ತಾಕತ್ತು ಇದೆಯೇ?’
ಬೆಂಗಳೂರು: ಕಾಂಗ್ರೆಸ್ ಪಕ್ಷದ 45 ಪ್ರಮುಖ ನಾಯಕರು ತಮ್ಮ ಸಂಪರ್ಕದಲ್ಲಿದ್ದಾರೆ ಎಂದು ಹೇಳಿಕೆ ನೀಡಿರುವ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್ ಗೆ ಸಚಿವ ಪ್ರಿಯಾಂಕ್ ಖರ್ಗೆ ಎರಡು ಪ್ರಮುಖ ಸವಾಲುಗಳನ್ನು ಹಾಕಿದ್ದಾರೆ.
ಬಿಎಲ್ ಸಂತೋಷ್ ಹೇಳಿಕೆಗೆ ಟ್ವೀಟ್ ಮೂಲಕ ಸವಾಲು ಹಾಕಿದ ಪ್ರಿಯಾಂಕ್ ಖರ್ಗೆ, “ಬಿಎಲ್ ಸಂತೋಷ್ ಅವರಿಗೆ ಒಂದು ಸವಾಲು. ಒಂದು ದಿನವಲ್ಲ, ಒಂದು ತಿಂಗಳು ಸಮಯ ನೀಡುತ್ತೇವೆ. ನಮ್ಮ ಸರ್ಕಾರವನ್ನು ಬೀಳಿಸುವುದಿರಲಿ, ಅಲ್ಲಾಡಿಸಲು ಸಾಧ್ಯವಾ ಎಂದು ತೋರಿಸಲಿ” ಎಂದಿದ್ದಾರೆ.
“ಇದೆಲ್ಲವಕ್ಕೂ ಮಿಗಿಲಾಗಿ ಮತ್ತೊಂದು ಸವಾಲು, ಒಂದು ವಾರದ ಸಮಯದಲ್ಲಿ ಶಾಸಕಾಂಗ ಪಕ್ಷದ ನಾಯಕನನ್ನು ಹಾಗೂ ಮೇಲ್ಮನೆಯ ವಿಪಕ್ಷ ನಾಯಕನನ್ನು ಆಯ್ಕೆ ಮಾಡಿ ತೋರಿಸಲಿ. ಈ ಸವಾಲನ್ನು ಸ್ವೀಕರಿಸುವ ದಮ್ಮು, ತಾಕತ್ತು ಇದೆಯೇ? ಎಂದು ಬಿಎಲ್ ಸಂತೋಷ್ ಅವರಿಗೆ ಪ್ರಿಯಾಂಕ್ ಖರ್ಗೆ ಕೇಳಿದ್ದಾರೆ.
'@blsanthosh ಅವರಿಗೆ ಒಂದು ಸವಾಲು,
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) September 1, 2023
ಒಂದು ದಿನವಲ್ಲ, ಒಂದು ತಿಂಗಳು ಸಮಯ ನೀಡುತ್ತೇವೆ, ನಮ್ಮ ಸರ್ಕಾರವನ್ನು ಬೀಳಿಸುವುದಿರಲಿ, ಅಲ್ಲಾಡಿಸಲು ಸಾಧ್ಯವಾ ಎಂದು ತೋರಿಸಲಿ.
ಇದೆಲ್ಲವಕ್ಕೂ ಮಿಗಿಲಾಗಿ ಮತ್ತೊಂದು ಸವಾಲು,
ಒಂದು ವಾರದ ಸಮಯದಲ್ಲಿ ಶಾಸಕಾಂಗ ಪಕ್ಷದ ನಾಯಕನನ್ನು ಹಾಗೂ ಮೇಲ್ಮನೆಯ ವಿಪಕ್ಷ ನಾಯಕನನ್ನು ಆಯ್ಕೆ ಮಾಡಿ ತೋರಿಸಲಿ.
ಈ… pic.twitter.com/mfBgQPcLgO