ಶ್ರಮಜೀವಿಗಳ ಬೆವರಲ್ಲಿ ಬಿಟ್ಟಿ ತಿಂದವರ ಚರ್ಮ ಬೆಳ್ಳಗಿರಬಹುದು: ಆರಗ ಜ್ಞಾನೇಂದ್ರಗೆ ತಿರುಗೇಟು ಕೊಟ್ಟ ಪ್ರಿಯಾಂಕ್ ಖರ್ಗೆ

Prasthutha|

ಬೆಂಗಳೂರು: ಶ್ರಮಜೀವಿಗಳ ಬೆವರಲ್ಲಿ ಬಿಟ್ಟಿ ತಿಂದವರ ಚರ್ಮ ಬೆಳ್ಳಗಿರಬಹುದು ಎಂದು ಮಲ್ಲಿಕಾರ್ಜುನ್ ಖರ್ಗೆ ಅವರ ಮೈ ಬಣ್ಣದ ಕುರಿತು ಬಿಜೆಪಿ ಶಾಸಕ ಆರಗ ಜ್ಞಾನೇಂದ್ರಗೆ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ತಿರುಗೇಟು ನೀಡಿದ್ದಾರೆ.

- Advertisement -


ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ʼʼಶತಶತಮಾನಗಳಿಂದ ವರ್ಣಾಶ್ರಮದ ಹೆಸರಲ್ಲಿ ಶೋಷಣೆ ನಡೆಸಿ ಶ್ರಮಜೀವಿಗಳ ಬೆವರಿನಲ್ಲಿ ಬಿಟ್ಟಿ ತಿಂದವರ ಚರ್ಮ ಬೆಳ್ಳಗಿರಬಹುದು, ಸ್ವಾಭಿಮಾನದಿಂದ ದುಡಿದು ತಿನ್ನುವವರ ಮೈ ಬಿಸಿಲಲ್ಲಿ ಸುಟ್ಟಿರುತ್ತದೆ. ಆರಗ ಜ್ಞಾನೇಂದ್ರ ಅವರು ಒಂದೇ ಒಂದು ದಿನ ಮಣ್ಣು ಹೊತ್ತರೆ ಅವರ ಮೈಬಣ್ಣವೂ ಕಪ್ಪಗಾಗುತ್ತದೆ. ಮನುಸ್ಮೃತಿಯ ವರ್ಣಾಶ್ರಮವನ್ನು ಅಪ್ಪಿ ಒಪ್ಪಿ ಮುದ್ದಾಡುವ ಬಿಜೆಪಿಗೆ ದಲಿತರ ರಾಜಕೀಯ ಏಳಿಗೆಯ ಬಗ್ಗೆ ತೀವ್ರ ಅಸಹನೆ ಇರುವುದು ಇಂತಹ ಮಾತುಗಳಿಂದ ಹೊರಬರುತ್ತವೆʼʼ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ʼʼಬಿಜೆಪಿಯ ಈ ಅಸಹನೆ ಬಿಜೆಪಿಯನ್ನೇ ಸುಟ್ಟು ಕರಕಲು ಮಾಡುತ್ತದೆ, ಏಕೆಂದರೆ ಇದು ಮನುಸ್ಮೃತಿಯ ಕಾಲವಲ್ಲ, ಬಾಬಾ ಸಾಹೇಬರ ಸಂವಿಧಾನದ ಕಾಲʼʼ ಎಂದು ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿದ್ದಾರೆ.

- Advertisement -

Join Whatsapp