ಕಲಬುರಗಿ: ಬಿಜೆಪಿಯ ಮನುವಾದಿಗಳು ನನ್ನನ್ನು ಎನ್ ಕೌಂಟರ್ ಮಾಡುವುದಾಗಿ ಜೀವ ಬೆದರಿಕೆಯ ಪತ್ರ ಬರೆದು ಹತ್ತು ದಿನಗಳ ಹಿಂದೆ ನನ್ನ ಕಚೇರಿಗೆ ಕಳುಹಿಸಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದರು.
ಕಲಬುರಗಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ನೀವೇ (ಬಿಜೆಪಿ) ಈ ಚುನಾವಣೆಯಲ್ಲಿ ಗೊಂದಲ ಸೃಷ್ಟಿ ಮಾಡುತ್ತಿದ್ದೀರಿ. ಗೊಂದಲ ಸೃಷ್ಟಿಸಿ ಕಾನೂನು ಸುವ್ಯವಸ್ಥೆ ಹಾಳು ಮಾಡುತ್ತಿದ್ದೀರಿ. ಗಲಭೆ ಸೃಷ್ಟಿ ಮಾಡಿ ಚುನಾವಣೆ ಮಾಡಬೇಕು ಅಂತಿದ್ದಾರೆ. ನನ್ನ ಹೆಣ ಬೀಳಿಸಿಯಾದರೂ ಚುನಾವಣೆ ಗೆಲ್ಲಬೇಕು ಎಂಬ ಪ್ಲಾನ್ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.
ಅಲ್ಲದೆ, ತನಗೆ ಮತ್ತೊಂದು ಜೀವ ಬೆದರಿಕೆ ಬಂದಿದೆ. ಅದರಲ್ಲಿ ನನ್ನನ್ನು ಎನ್ಕೌಂಟರ್ ಮಾಡುವುದು ಸತ್ಯ ಎಂದು ಬೆದರಿಕೆ ಹಾಕಲಾಗಿದೆ ಅಲ್ಲದೆ, ಈ ಬೆದರಿಕೆ ಪತ್ರ ಫಿನ್ ಲ್ಯಾಂಡ್ ನಿಂದ ಬಂದಿದೆ ಎಂದು ಹೇಳಿದ್ದಾರೆ.