ವಿವೇಕ ಶಾಲೆಗಳಿಗೆ ಕೇಸರಿ ಬದಲು ತ್ರಿವರ್ಣ ಧ್ವಜದ ಬಣ್ಣ ಹಾಕಲು ಒತ್ತಾಯಿಸಿದ ಪ್ರಿಯಾಂಕ್ ಖರ್ಗೆ

Prasthutha|

ಬೆಂಗಳೂರು: ರಾಜ್ಯದಲ್ಲಿ ನಿರ್ಮಾಣವಾಗುತ್ತಿರುವ 8,100 ವಿವೇಕ ಶಾಲೆಗಳಿಗೆ ಕೇಸರಿ ಬಣ್ಣ ಹಾಕುವ ಕುರಿತು ಎದ್ದಿರುವ ವಿವಾದಕ್ಕೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಸಂವಹನ ವಿಭಾಗದ ಮುಖ್ಯಸ್ಥ ಪ್ರಿಯಾಂಕ್ ಖರ್ಗೆ,  ಶಾಲೆಗಳ ಗೋಡೆಗಳಿಗೆ ತ್ರಿವರ್ಣ ಧ್ವಜದ ಬಣ್ಣ ಹಾಕಬೇಕೆಂದು ಒತ್ತಾಯಿಸಿದ್ದಾರೆ.

- Advertisement -

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಸರಿ ಬಣ್ಣಕ್ಕೆ ವಿರೋಧವಿಲ್ಲ. ಆದರೆ ಸರ್ಕಾರದ ಆದ್ಯತೆಗೆ ವಿರೋಧವಿದೆ. ಎಷ್ಟೋ ಶಾಲೆಗಳಲ್ಲಿ ಶಿಕ್ಷಕರು, ಮೂಲಸೌಕರ್ಯದ ಕೊರತೆಯಿದೆ. ಮೂಲಸೌಕರ್ಯ ಒದಗಿಸಲು ಅನುದಾನ ಒದಗಿಸದ ಸರ್ಕಾರ ಶಾಲೆಗಳ ಗೋಡೆಗಳಿಗೆ ಬಣ್ಣ ನೀಡಲು ಆದ್ಯತೆ ನೀಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕೇಸರಿ ಬಣ್ಣ ಮಾತ್ರ ಏಕೆ ಹಾಕಬೇಕು ಎಂದು ಪ್ರಶ್ನಿಸಿದ ಖರ್ಗೆ, ಸ್ವತಂತ್ರ ಭಾರತದಲ್ಲಿ ರಾಷ್ಟ್ರೀಯವಾದಿ ಪಕ್ಷ ಎಂದು ನೀವೇ ಹೇಳಿಕೊಳ್ಳುವಂತೆ ಶಾಲೆಗಳ ಗೋಡೆಗಳಿಗೆ ತ್ರಿವರ್ಣ ಧ್ವಜದ ಬಣ್ಣ ಹಾಕಬೇಕು. ಆರ್ಕಿಟೆಕ್ಚರ್‌ ಸಲಹೆ ಪಡೆಯುವುದಾಗಿ ಹೇಳಿದ್ದೀರಿ. ಹಾಗಾದರೆ ಸರ್ಕಾರ ಮತ್ತು ಇಲಾಖೆಯನ್ನು ಅವರ ಸಲಹೆ ಮೇರೆಗೆ ನಡೆಸಲಾಗುತ್ತಿದೆಯೇ? ಎಂದು ಪ್ರಿಯಾಂಕ್ ಖರ್ಗೆ ಟೀಕಿಸಿದರು.



Join Whatsapp