Home ಟಾಪ್ ಸುದ್ದಿಗಳು ಪ್ರಿಯಾಂಕಾ ಗಾಂಧಿ ಮತ್ತೆ ಆಸ್ಪತ್ರೆಗೆ ದಾಖಲು

ಪ್ರಿಯಾಂಕಾ ಗಾಂಧಿ ಮತ್ತೆ ಆಸ್ಪತ್ರೆಗೆ ದಾಖಲು

ನವದೆಹಲಿ: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದ್ದು, ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಿರ್ಜಲೀಕರಣ ಮತ್ತು ಹೊಟ್ಟೆಯ ಸೋಂಕಿನ ಅನಾರೋಗ್ಯದಿಂದ ಅವರು ಮತ್ತೆ ಆಸ್ಪತ್ರೆ ಸೇರಿದ್ದಾರೆ ಎನ್ನಲಾಗಿದೆ.

ಲೋಕಸಭಾ ಚುನಾವಣೆಗಳು ಹತ್ತಿರದಲ್ಲಿದ್ದು, ಕಾಂಗ್ರೆಸ್‌ನಿಂದ ಭಾರತ್ ಜೋಡೋ ನ್ಯಾಯ್ ಯಾತ್ರೆಯೂ ನಡೆಯುತ್ತಿದೆ. ಯಾತ್ರೆ ಯುಪಿಯನ್ನು ಪ್ರವೇಶಿಸಿದೆ. ಆದರೆ ಅನಾರೋಗ್ಯ ಕಾರಣ ಪ್ರಿಯಾಂಕಾಗೆ ಅದರಲ್ಲಿ ಸೇರಲು ಸಾಧ್ಯವಾಗುತ್ತಿಲ್ಲ. ಪ್ರಿಯಾಂಕಾ ಇತ್ತೀಚೆಗೆ ತಮ್ಮ ಆರೋಗ್ಯ ಸುಧಾರಿಸಿದ ಕೂಡಲೇ ಯಾತ್ರೆಗೆ ಸೇರುವುದಾಗಿ ಹೇಳಿದ್ದರು.

Join Whatsapp
Exit mobile version