Home ಟಾಪ್ ಸುದ್ದಿಗಳು ಮಧ್ಯಪ್ರದೇಶದಲ್ಲಿ 5 ಗ್ಯಾರಂಟಿಗಳನ್ನು ಘೋಷಿಸಿದ ಪ್ರಿಯಾಂಕಾ ಗಾಂಧಿ

ಮಧ್ಯಪ್ರದೇಶದಲ್ಲಿ 5 ಗ್ಯಾರಂಟಿಗಳನ್ನು ಘೋಷಿಸಿದ ಪ್ರಿಯಾಂಕಾ ಗಾಂಧಿ

ನವದೆಹಲಿ: ವಿಧಾನಸಭಾ ಚುನಾವಣೆ ಹೊಸ್ತಿಲಲ್ಲಿರುವ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಸೋಮವಾರ ಪಕ್ಷದ ಪರ ಪ್ರಚಾರಕ್ಕೆ ಚಾಲನೆ ನೀಡಿದ್ದಾರೆ.


ರಾಜ್ಯದ ಜನರಿಗೆ ಐದು ಭರವಸೆಗಳನ್ನು ಘೋಷಿಸಿದ್ದಾರೆ. ಐದು ಖಾತರಿಗಳ ಕುರಿತು ಮಾತನಾಡಿದ ಪ್ರಿಯಾಂಕಾ ಗಾಂಧಿ, ರಾಜ್ಯದ ಪ್ರತಿ ಮಹಿಳೆಗೆ ಮಾಸಿಕ 1,500 ರೂ. ಸಹಾಯಧನ, ಪ್ರತಿ ಮನೆಗೆ 500 ರೂಗೆ ಎಲ್ಪಿಜಿ ಗ್ಯಾಸ್ ಸಿಲಿಂಡರ್, 100 ಯೂನಿಟ್ ವಿದ್ಯುತ್ ಉಚಿತ ಮತ್ತು 200 ಯೂನಿಟ್ ಅರ್ಧ ದರದಲ್ಲಿ ನೀಡಲಾಗುವುದು. ರೈತರ ಸಾಲ ಮನ್ನಾ ಮಾಡಿ ರಾಜ್ಯದಲ್ಲಿ ಹಳೆಯ ಪಿಂಚಣಿ ಯೋಜನೆ ಜಾರಿಗೊಳಿಸಲಾಗುವುದು ಎನ್ನುವ ಭರವಸೆ ನೀಡಿದ್ದಾರೆ. ಬಿಜೆಪಿಯು ಮಾತನಾಡುತ್ತದೆ ಆದರೆ ಯಾವುದೇ ಭರವಸೆಗಳನ್ನು ಈಡೇರಿಸುವುದಿಲ್ಲ, ಮಾತನಾಡುವ ಬದಲು ಕೆಲಸ ಮಾಡಿ ತೋರಿಸಬೇಕು ಎಂದರು.

ನಮ್ಮ ಪಕ್ಷ ಏನೇ ಭರವಸೆ ನೀಡಿದ್ದರೂ ಛತ್ತೀಸ್ ಗಢ ಮತ್ತು ಹಿಮಾಚಲ ಪ್ರದೇಶದಲ್ಲಿ ಈಡೇರಿಸಿದ್ದೇವೆ, ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಸ್ಥಿತಿ ನೋಡಿ ನಿಮಗೆ ಅರಿವಾಗುತ್ತದೆ. ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ, ಬಹಳಷ್ಟು ಕೆಲಸ ಮತ್ತು ಅಭಿವೃದ್ಧಿ ಮಾಡಲಾಗಿದೆ, ಎಂದು ಅವರು ಹೇಳಿದರು.

Join Whatsapp
Exit mobile version