ಉನ್ನಾವೋ ಸಂತ್ರಸ್ತೆಯ ತಾಯಿ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಅಭ್ಯರ್ಥಿ: ಪ್ರಿಯಾಂಕಾ ಗಾಂಧಿ ಘೋಷಣೆ

Prasthutha|

ಲಕ್ನೋ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಉನ್ನಾವೋ ಸಂತ್ರಸ್ತೆಯ ತಾಯಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕಿಳಿದಿದ್ದಾರೆ. ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಉನ್ನಾವೋದಲ್ಲಿ ಘೋಷಿಸಿದ ಪ್ರಥಮ ಹಂತದ 125 ಅಭ್ಯರ್ಥಿಗಳ ಪಟ್ಟಿಯಲ್ಲಿ  ಸಂತ್ರಸ್ತ ಬಾಲಕಿಯ ತಾಯಿಯ ಹೆಸರೂ ಒಳಗೊಂಡಿತ್ತು.

- Advertisement -

ಅಭ್ಯರ್ಥಿಯನ್ನು ಘೋಷಿಸಿದ ಪ್ರಿಯಾಂಕಾ ಗಾಂಧಿ, ಅಭ್ಯರ್ಥಿಗಳ ಪಟ್ಟಿಯು ಹಿಂಸೆಗೊಳಗಾದವರೊಂದಿಗೆ ಕಾಂಗ್ರೆಸ್ ಇರುತ್ತದೆ ಎಂಬ ಸಂದೇಶವನ್ನು ನೀಡುತ್ತದೆ ಎಂದು ಹೇಳಿದರು. 125 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಉನ್ನಾವೋ ಸಂತ್ರಸ್ತೆಯ ತಾಯಿ ಸೇರಿದಂತೆ 50 ಮಹಿಳಾ ಅಭ್ಯರ್ಥಿಗಳಿದ್ದಾರೆ. ಗೌರವ ಧನ ಹೆಚ್ಚಳಕ್ಕೆ ಒತ್ತಾಯಿಸಿ ಹೋರಾಟದ ನೇತೃತ್ವ ವಹಿಸಿದ್ದ ಆಶಾ ಕಾರ್ಯಕರ್ತೆ ಪೂನಂ ಪಾಂಡೆ ಕೂಡ ಕಾಂಗ್ರೆಸ್ ಅಭ್ಯರ್ಥಿ ಪಟ್ಟಿಯಲ್ಲಿದ್ದಾರೆ.

125 ಅಭ್ಯರ್ಥಿಗಳಲ್ಲಿ ಶೇ.40 ರಷ್ಟು ಮಹಿಳೆಯರು ಮತ್ತು ಶೇ.40 ರಷ್ಟು ಯುವಕರು ಸ್ಪರ್ಧಿಸುತ್ತಿದ್ದಾರೆ. ಐತಿಹಾಸಿಕ ಕಾರ್ಯಾಚರಣೆಗಳ ಮೂಲಕ ರಾಜ್ಯದಲ್ಲಿ ಹೊಸ ರೀತಿಯ ಆಡಳಿತ ವ್ಯವಸ್ಥೆಯನ್ನು ರೂಪಿಸುವ ಭರವಸೆ ಇದೆ ಎಂದು ಪ್ರಿಯಾಂಕಾ ಗಾಂಧಿ ಹೇಳಿದರು.

Join Whatsapp