ಹೋಟೆಲ್’ನಲ್ಲಿ ತಾನೇ ದೋಸೆ ಹಾಕಿ ರುಚಿ ಸವಿದ ಪ್ರಿಯಾಂಕಾ ಗಾಂಧಿ

Prasthutha|

ಮೈಸೂರು: ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಪ್ರಚಾರಕ್ಕೆ ಕಾರ್ನಾಟಕ ಪ್ರವಾಸದಲ್ಲಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಬುಧವಾರ ಮೈಸೂರಿನ ಪ್ರಸಿದ್ಧ ಮೈಲಾರಿ ದೋಸೆಯನ್ನು ಸವಿದು ಪ್ರಿಯಾಂಕಾ ಫಿದಾ ಆಗಿದ್ದಾರೆ.

- Advertisement -


ಪ್ರಿಯಾಂಕಾ ಗಾಂಧಿ ಮೈಸೂರಿನ ಅಗ್ರಹಾರ ಬಳಿ ಇರುವಾ ಹೆಸರಾಂತ ಮೈಲಾರಿ ಹೋಟೆಲ್ ಗೆ ತೆರಳಿದ್ದು, ಅಲ್ಲಿ ಅವರು ಅಡುಗೆ ಮನೆಯಲ್ಲಿ ಖುದ್ದು ತವಾ ಮೇಲೆ ದೋಸೆ ಹಾಕಿ ಸಂತೋಷ ವ್ಯಕ್ತಪಡಿಸಿದ ಪ್ರಿಯಾಂಕಾ ಬಳಿಕ ದೋಸೆ ಸವಿದು ರುಚಿಗೆ ಮನಸೋತಿದ್ದಾರೆ.


ಬಳಿಕ ಮಾತನಾಡಿದ ಅವರು, ನಾನಿಲ್ಲಿ ಇಡ್ಲಿ, ದೋಸೆ ಸವಿದಿದ್ದೇನೆ. ಎಲ್ಲವೂ ತುಂಬಾ ರುಚಿಕರವಾಗಿತ್ತು. ಇದನ್ನು ಮನೆಯಲ್ಲಿ ಹೇಗೆ ಮಾಡಬೇಕು ಎಂಬುದನ್ನು ತಿಳಿದುಕೊಂಡಿದ್ದೇನೆ. ನಾನು ಇದನ್ನು ಮನೆಯಲ್ಲಿಯೂ ಟ್ರೈ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

Join Whatsapp