Home ಟಾಪ್ ಸುದ್ದಿಗಳು ನಾ ನಾಯಕಿ ಸಮಾವೇಶದಲ್ಲಿ ಇಂದು ಪ್ರಿಯಾಂಕಾ ಗಾಂಧಿ ಭಾಗಿ

ನಾ ನಾಯಕಿ ಸಮಾವೇಶದಲ್ಲಿ ಇಂದು ಪ್ರಿಯಾಂಕಾ ಗಾಂಧಿ ಭಾಗಿ

ಹೊಸದಿಲ್ಲಿ: ಇಂದು (ಜನವರಿ 16) ಪ್ರಿಯಾಂಕಾ ಗಾಂಧಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ನಾ ನಾಯಕಿ ಎಂಬ ಮಹಿಳಾ ಸಮಾವೇಶವನ್ನು ಉದ್ಘಾಟಿಸಲಿದ್ದಾರೆ.

ಕಾಂಗ್ರೆಸ್‌ನ ರಾಜ್ಯ ಮಹಿಳಾ ಘಟಕವು ಈ ಸಮಾವೇಶವನ್ನು ಆಯೋಜಿಸಿದ್ದು, ವಿವಿಧ ಪಂಚಾಯತ್‌ಗಳು ಮತ್ತು ಸಹಕಾರಿ ಸಂಘಗಳಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದ ಮಹಿಳೆಯರೊಂದಿಗೆ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರು ಕೂಡ ಭಾಗವಹಿಸಲಿದ್ದಾರೆ. ಪ್ರತಿ ಬೂತ್ ಅಥವಾ ಪಂಚಾಯಿತಿಯಿಂದ 3ರಿಂದ 10 ಮಹಿಳೆಯರಿಗೆ ಸಮಾವೇಶದಲ್ಲಿ ಪಾಲ್ಗೊಳ್ಳುವಂತೆ ಕರೆ ನೀಡಲಾಗಿದೆ.

ಮಹಿಳೆಯರಿಗಾಗಿ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡುವ ಸಲುವಾಗಿ ಪ್ರಿಯಾಂಕಾ ಗಾಂಧಿ ಅವರನ್ನು ಬೆಂಗಳೂರಿಗೆ ಕರೆಸಲಾಗುತ್ತಿದೆ ಎನ್ನಲಾಗುತ್ತಿದೆ. ನಾ ನಾಯಕಿ ಸಮಾವೇಶದಲ್ಲಿ ಕರ್ನಾಟಕದಲ್ಲಿ ಹೆಚ್ಚಿನ ಮಹಿಳಾ ಮತದಾರರನ್ನು ಸೆಳೆಯುವ ಉದ್ದೇಶದಿಂದ ಮಹಿಳಾ ಕಲ್ಯಾಣಕ್ಕಾಗಿ ಪ್ರತ್ಯೇಕ ಪ್ರಣಾಳಿಕೆಯನ್ನು ಕಾಂಗ್ರೆಸ್ ಬಿಡುಗಡೆ ಮಾಡಲು ನಿರ್ಧರಿಸಿದೆ.

ಸುಮಾರು 1 ಲಕ್ಷ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಳ್ಳುವ ನಿರೀಕ್ಷೆಯಿದೆ.

Join Whatsapp
Exit mobile version