ರಮೇಶ್ ಕುಮಾರ್ ಹೇಳಿಕೆಯನ್ನು ತೀಕ್ಷ್ಣವಾಗಿ ಖಂಡಿಸಿದ ಪ್ರಿಯಾಂಕ ಗಾಂಧಿ

Prasthutha: December 18, 2021

ನವದೆಹಲಿ: ಕರ್ನಾಟಕ ವಿಧಾನಸಭೆಯಲ್ಲಿ ಕಾಂಗ್ರೆಸ್ ಶಾಸಕ ಕೆ.ಆರ್.ರಮೇಶ್ ಕುಮಾರ್ ಅತ್ಯಾಚಾರದ ಕುರಿತು ನೀಡಿರುವ ಹೇಳಿಕೆಯನ್ನು ಅವರದ್ದೇ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಖಂಡಿಸಿದ್ದಾರೆ.

‘ಕೆ.ಆರ್.ರಮೇಶ್ ಕುಮಾರ್ ನೀಡಿರುವ ಹೇಳಿಕೆಯನ್ನು ಸಂಪೂರ್ಣವಾಗಿ ಖಂಡಿಸುತ್ತೇನೆ. ಯಾರೇ ಆದರೂ ಅಂತಹ ಪದಗಳನ್ನು ಬಳಸಬಾರದು. ಅದು ಸಮರ್ಥನೀಯವಲ್ಲ. ಅತ್ಯಾಚಾರ ಎಂಬುದು ಘೋರ ಅಪರಾಧವಾಗಿದೆ. ಫುಲ್ ಸ್ಟಾಪ್’ ಎಂದು ಪ್ರಿಯಾಂಕಾ ಗಾಂಧಿ ಟ್ವೀಟ್ ಮಾಡಿದ್ದಾರೆ.

ಕರ್ನಾಟಕ ವಿಧಾನಸಭೆಯಲ್ಲಿ ಗುರುವಾರ ನಡೆದ ಚರ್ಚೆಯ ವೇಳೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಶಾಸಕರ ವರ್ತನೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಎಷ್ಟು ಶಾಸಕರು ಬೇಕಾದರೂ ಮಾತನಾಡಲಿ, ನಾನು ಕೇಳುತ್ತಾ ಆನಂದಿಸುವುದನ್ನು ಬಿಟ್ಟರೆ ಇನ್ನೇನು ಮಾಡಲಿ ಎಂದು ಅಸಹಾಯಕತೆ ವ್ಯಕ್ತಪಡಿಸಿದ್ದರು. ಆಗ ಕಾಂಗ್ರೆಸ್ ಶಾಸಕ ಮತ್ತು ಮಾಜಿ ಸ್ಪೀಕರ್ ‘ದೇರ್‌ ಈಸ್‌ ಎ ಸೇಯಿಂಗ್‌, ವೆನ್‌ ರೇಪ್‌ ಈಸ್‌ ಇನೆವಿಟೆಬಲ್‌ ಲೆಟ್‌ ಲೇ ಡೌನ್‌ ಅಂಡ್‌ ಎಂಜಾಯ್‌’ ( ಅತ್ಯಾಚಾರದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗದಿದ್ದರೆ ಮಲಗಿ ಆನಂದಿಸಿ) ಎಂದು ಹೇಳಿದ್ದರು. ಇದನ್ನು ಕೇಳಿ ಕಾಗೇರಿ ನಗಾಡಿದ್ದರು.

ಬಳಿಕ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದ್ದು, ರಮೇಶ್ ಕುಮಾರ್ ಕ್ಷಮೆ ಕೇಳಿದ ಬಳಿಕವೂ ಖಂಡನೆ ಮುಂದುವರಿಯುತ್ತಿದೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!