ಆಕ್ಸಿಜನ್ ಕೊರತೆಗೆ ಕೇಂದ್ರ ಸರ್ಕಾರದ ನಿರ್ಲಕ್ಷ್ಯವೇ ಕಾರಣ : ಪ್ರಿಯಾಂಕಾ ಗಾಂಧಿ ಆಕ್ರೋಶ

Prasthutha|

ಹೊಸದಿಲ್ಲಿ : ವಿಶ್ವದಲ್ಲಿಯೇ ಬೃಹತ್ ಪ್ರಮಾಣದ ಆಕ್ಸಿಜನ್ ಉತ್ಪಾದನೆ ಭಾರತದಲ್ಲಿರುವಾಗ ಆಕ್ಸಿಜನ್ ಕೊರತೆ ಹೇಗೆ ಉಂಟಾಯಿತು. ಕೊರೋನಾ ಒಂದನೇ ಅಲೆಯ ಬಳಿಕ ಸರಕಾರ ಎಚ್ಚರಿಕೆಯಿಂದ ಇರಬೇಕಿತ್ತು. ಸರ್ಕಾರದ ನಿರ್ಲಕ್ಷ್ಯವೇ ಆಕ್ಸಿಜನ್ ಕೊರತೆಗೆ ಕಾರಣ ಎಂದು ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ಮುಂದೆ ಸಾಕಷ್ಟು ಸಮಯವಿತ್ತು. ಆಕ್ಸಿಜನ್ ನಮ್ಮಲ್ಲಿ ಇದೆ, ಆದರೆ ಅದು ತಲುಪಬೇಕಾದಲ್ಲಿಗೆ ತಲುಪುತ್ತಿಲ್ಲ. ಕಳೆದ ಆರು ತಿಂಗಳಲ್ಲಿ 1.1 ಮಿಲಿಯನ್ ರೆಮೆಡಿಸಿವಿರ್ ರಫ್ತಾಗಿದೆ. ಇಂದು ನಾವು ಕೊರತೆ ಎದುರಿಸುತ್ತಿದ್ದೇವೆ ಎಂದರೆ ಏನರ್ಥ ಎಂದು ಪ್ರಶ್ನಿಸಿದ್ದಾರೆ.

ಕಳೆದ ಜನವರಿಯಿಂದ ಮಾರ್ಚ್ ಮಧ್ಯೆ ಕೇಂದ್ರ ಸರ್ಕಾರ 6 ಕೋಟಿ ಲಸಿಕೆಗಳನ್ನು ರಫ್ತು ಮಾಡಿದೆ. ಈ ಸಮಯದಲ್ಲಿ 3ರಿಂದ 4 ಕೋಟಿ ಭಾರತೀಯರಿಗೆ ಲಸಿಕೆ ಹಾಕಲಾಗಿದೆ. ಭಾರತೀಯರಿಗೆ ಪ್ರಾಧಾನ್ಯತೆ ಕೊಡದ ಸರಕಾರದ ತಪ್ಪು ನಿರ್ಧಾರದಿಂದಾಗಿ ಲಸಿಕೆಯ ಕೊರತೆ, ರೆಮೆಡಿಸಿವಿರ್ ಕೊರತೆ, ಆಕ್ಸಿಜನ್ ಕೊರತೆ ಉಂಟಾಗಿದೆ ಎಂದು ಪ್ರಿಯಾಂಕಾ ಆರೋಪಿಸಿದ್ದಾರೆ.

Join Whatsapp