ರಾಜ್ಯದ ಬಿಜೆಪಿ ಸರ್ಕಾರ ಲೂಟಿ ಹೊಡೆದ ಹಣದಲ್ಲಿ 100 ಏಮ್ಸ್ ಆಸ್ಪತ್ರೆ ನಿರ್ಮಿಸಬಹುದಿತ್ತು: ಪ್ರಿಯಾಂಕಾ ಗಾಂಧಿ ವಾಗ್ದಾಳಿ

Prasthutha|

ಬೆಳಗಾವಿ: ರಾಜ್ಯದಲ್ಲಿ ಭ್ರಷ್ಟಾಚಾರ ಸರ್ಕಾರ ಇದೆ. ರಾಜ್ಯ ಸರ್ಕಾರ 1.5 ಲಕ್ಷ ಕೋಟಿ ಹಣ ಲೂಟಿ ಮಾಡಿದೆ. ಈ ಹಣದಿಂದ 100 ಏಮ್ಸ್ ಆಸ್ಪತ್ರೆ ನಿರ್ಮಾಣ ಮಾಡಬಹುದಿತ್ತು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಕಿಡಿಕಾರಿದರು.

- Advertisement -

ಜಿಲ್ಲೆಯ ಖಾನಾಪುರದಲ್ಲಿ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಲೂಟಿ ಮಾಡಿದ ಹಣದಿಂದ 30 ಲಕ್ಷ ಮನೆ ನಿರ್ಮಿಸಬಹುದಿತ್ತು. 2,250 ಕಿ.ಮೀ. ಆರು ಪಥದ ಎಕ್ಸ್ಪ್ರೆಸ್ ವೇ ನಿರ್ಮಿಸಬಹುದು. ನೂರಕ್ಕೂ ಹೆಚ್ಚು ಇಎಸ್ಐ ಆಸ್ಪತ್ರೆ ನಿರ್ಮಿಸಬಹುದಿತ್ತು. 30 ಸಾವಿರ ಸ್ಮಾರ್ಟ್ ಕ್ಲಾಸ್ ನಿರ್ಮಾಣ ಮಾಡಬಹುದಿತ್ತು. ಬಿಜೆಪಿಯವರಿಗೆ ಕೊಟ್ಟ ಭರವಸೆ ಈಡೇರಿಸುವ ಮನಸ್ಥಿತಿ ಇಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಪ್ರಿಯಾಂಕಾ ಗಾಂಧಿ ವಾಗ್ದಾಳಿ ಮಾಡಿದರು.

ಕರ್ನಾಟಕದಲ್ಲಿ ಎಲ್ಲವೂ ಇದೆ, ಅರಣ್ಯ ಸಂಪತ್ತು, ಖನಿಜ ಸಂಪತ್ತು ಇದೆ. ಇಲ್ಲಿಯ ಯುವಕರು ಶಿಕ್ಷಿತರಿದ್ದು ಅವರ ಭವಿಷ್ಯ ಉತ್ತಮವಾಗಿದೆ. ಇಡೀ ಜಗತ್ತಿನಲ್ಲಿ ಬೆಂಗಳೂರು ಸುಪ್ರಸಿದ್ಧವಾಗಿದೆ. ತಂತ್ರಜ್ಞಾನ ಕ್ಷೇತ್ರದಲ್ಲಿ ಬೆಂಗಳೂರು ಜಗತ್ತಿನಲ್ಲೇ ಹೆಸರುವಾಸಿ. ನಾನು ವಿದೇಶಕ್ಕೆ ಹೋದಾಗ ಕರ್ನಾಟಕದ ಯುವಕರು ಐಟಿಯಲ್ಲಿ ಕೆಲಸ ಮಾಡುವವರು ಸಿಕ್ಕಾಗ ಹೆಮ್ಮೆಯಾಗುತ್ತದೆ. ಆದರೆ ಕರ್ನಾಟಕದಲ್ಲಿ ಇರುವ ಸರ್ಕಾರಕ್ಕೆ ಇದರ ಬಗ್ಗೆ ಗೊತ್ತಿಲ್ಲ ಎಂದರು.

Join Whatsapp