ಉಗ್ರರ ಪರ ಗೋಡೆ ಬರಹ ಪ್ರಕರಣದ ಆರೋಪಿ ಬಂಧನದ ಮಾಹಿತಿಯಿಲ್ಲ : ಗೃಹ ಸಚಿವ ಬೊಮ್ಮಾಯಿ

Prasthutha|

ಉಡುಪಿ : ಕೆಲವು ದಿನಗಳ ಹಿಂದೆ ಮಂಗಳೂರಿನಲ್ಲಿ ಗೋಡೆಗಳ ಮೇಲೆ ಉಗ್ರರ ಪರವಾಗಿ ಬರೆಯಲ್ಪಟ್ಟಿದ್ದ ಗೋಡೆ ಬರಹ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಬಂಧಿಸಿರುವ ಬಗ್ಗೆ ತನಗೆ ಯಾವುದೇ ಮಾಹಿತಿ ಇಲ್ಲ ಎಂದು ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಉಡುಪಿಯಲ್ಲಿ ಅವರು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸುತ್ತಾ ಈ ಪ್ರತಿಕ್ರಿಯೆ ನೀಡಿದರು. ಪ್ರಕರಣಕ್ಕೆ ಸಂಬಂಧಿಸಿ ಯಾರನ್ನೂ ಬಂಧಿಸಿರುವ ಬಗ್ಗೆ ಮಾಹಿತಿಯಿಲ್ಲ, ವಿವರಗಳನ್ನು ಪಡೆದು ಸಂಜೆಯೊಳಗೆ ಮಾಹಿತಿ ನೀಡುವುದಾಗಿ ಅವರು ತಿಳಿಸಿದರು.  

- Advertisement -

ಪ್ರಕರಣಕ್ಕೆ ಸಂಬಂಧಿಸಿ ಇಮದು ಬೆಳಗ್ಗೆ ಮಂಗಳೂರಿನಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಆರೋಪಿಗಳ ಶೀಘ್ರ ಪತ್ತೆಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ ಎಂದು ಸಚಿವರು ತಿಳಿಸಿದರು.

- Advertisement -