ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾರೆ ಎಂಬ ಆರೋಪದಲ್ಲಿ ಬಂಧಿತರಾಗಿದ್ದ ಮೂವರಿಗೆ ಜಾಮೀನು ಮಂಜೂರು ಮಾಡಲಾಗಿದೆ.
ಮೊಹಮ್ಮದ್ ಶಫಿ ನಾಶಿಪುಡಿ, ಮುಜಾಮಿಲ್, ಇಲ್ತಾಝ್ ಅವರಿಗೆ ಜಾಮೀನು ಮಂಜೂರು ಮಾಡಲಾಗಿದೆ. ಬೆಂಗಳೂರಿನ 39ನೇ ಎಸಿಎಂಎಂ ನ್ಯಾಯಾಲಯದಿಂದ ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದೆ.
ನಾಸಿರ್ ಹುಸೇನ್ ರಾಜ್ಯಸಭೆ ಚುನಾವಣೆಯಲ್ಲಿ ಜಯಗಳಿಸುತ್ತಿದ್ದಂತೆ ಸಂಭ್ರಮಾಚರಣೆ ವೇಳೆ ನಾಸಿರ್ ಹುಸೈನ್ ಪರ ಘೋಷಣೆ ಕೂಗಿದ್ದರು. ಅದರ ಜೊತ ಪಾಕ್ ಪರ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಲಾಗಿತ್ತು. ನಂತರ ವಿಧಾನಸೌಧ ಠಾಣೆ ಪೋಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದರು. ವಿಚಾರಣೆ ವೇಳೆ ಇದನ್ನು ಆರೋಪಿಗಳು ಒಪ್ಪಿಕೊಂಡಿರಲಿಲ್ಲ