Home ಕರಾವಳಿ ಪಾಕ್ ಪರ ಘೋಷಣೆ | ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ SDPI ಯಿಂದ ಪೊಲೀಸ್ ಠಾಣೆ ಮುತ್ತಿಗೆ

ಪಾಕ್ ಪರ ಘೋಷಣೆ | ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ SDPI ಯಿಂದ ಪೊಲೀಸ್ ಠಾಣೆ ಮುತ್ತಿಗೆ

ಬೆಳ್ತಂಗಡಿ : ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆನ್ನಲಾದ ಬಿಜೆಪಿ ಕಾರ್ಯಕರ್ತರ ವಿರುದ್ಧ ದೂರು ನೀಡಿ ಮೂರು ದಿನ ಕಳೆದರೂ ಆರೋಪಿಗಳನ್ನು ಬಂಧಿಸಿಲ್ಲ ಎಂದು ಆಪಾದಿಸಿರುವ ಎಸ್ ಡಿಪಿಐ ಕಾರ್ಯಕರ್ತರು ಇಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದಾರೆ.

ಠಾಣೆಯ ಮುಂದೆ ನೂರಾರು ಪ್ರತಿಭಟನಕಾರರು ಜಮಾಯಿಸಿದ್ದು, ನೈಜ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿದ್ದಾರೆ. ಎಸ್.ಡಿ.ಪಿ.ಐ ಕಾರ್ಯಕರ್ತರ ಮೇಲೆ ದಾಖಲಾಗಿರುವ ಸುಳ್ಳು ಪ್ರಕರಣಗಳನ್ನು ಹಿಂಪಡೆಯಬೇಕು. ಪಾಕ್ ಪರ ಘೋಷಣೆ ಕೂಗಿದ ನೈಜ ಆರೋಪಿಗಳ ಮೇಲೆ ಎಫ್.ಐ.ಆರ್. ದಾಖಲಿಸಿ ಕೂಡಲೇ ಅವರನ್ನು ಬಂಧಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಡಿವೈಎಸ್ ಪಿ ವ್ಯಾಲೆಂಟೈನ್ ಡಿಸೋಜಾ ಸ್ಥಳಕ್ಕೆ ಆಗಮಿಸಿದ್ದು, ಪ್ರತಿಭಟನಕಾರರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ.

ಪ್ರತಿಭಟನಕಾರರನ್ನು ತಡೆಯಲು ಪೊಲೀಸರು ಬ್ಯಾರಿಕೇಡ್ ಹಾಕಿದ್ದಾರೆ. ಈ ವೇಳೆ ಎಸ್ ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿ ಅಲ್ಫೋನ್ಸೊ ಫ್ರಾಂಕೊ, ದ.ಕ. ಜಿಲ್ಲಾ ಉಪಾಧ್ಯಕ್ಷ ಪಿ.ಡಿ. ಆಂಟನಿ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಹೈದರ್ ನೀರ್ಸಾಲ್, ವಿಧಾನಸಭಾ ಸಮಿತಿ ಸದಸ್ಯ ನವಾಝ್ ಕಟ್ಟೆ ಮುಂತಾದವರು ಉಪಸ್ಥಿತರಿದ್ದರು.

Join Whatsapp
Exit mobile version