ಉಗ್ರರ ಪರ ಗೋಡೆ ಬರಹ ಕೇಸ್ | ಆರೋಪಿ ಪೊಲೀಸ್ ವಶಕ್ಕೆ

Prasthutha: December 3, 2020

ಮಂಗಳೂರು : ನಗರದಲ್ಲಿ ಉಗ್ರರ ಪರ ಗೋಡೆ ಬಹರ ಬರೆದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೊಬ್ಬನನ್ನು ಮಂಗಳೂರು ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆರೋಪಿಯನ್ನು ತೀರ್ಥಹಳ್ಳಿಯ ನಝೀರ್ ಮುಹಮ್ಮಸ್ (26) ಎಂದು ಗುರುತಿಸಲಾಗಿದೆ. ಇಂದು ಮುಂಜಾನೆ ಕದ್ರಿ ಪೊಲೀಸರು ಆತನನ್ನು ವಶಕ್ಕೆ ಪಡೆಯಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ವರದಿಯೊಂದು ತಿಳಿಸಿದೆ.

ಆರೋಪಿ ನಝೀರ್ ನಗರದಲ್ಲಿ ಆನ್ ಲೈನ್ ಫುಡ್ ಡೆಲಿವರಿ ಕೆಲಸ ಮಾಡಿಕೊಂಡಿದ್ದ. ಮೊಬೈಲ್ ದಾಖಲೆ ಆಧಾರದಲ್ಲಿ ಆತನನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.

ನ.27ರಂದು ಕದ್ರಿ ಪೊಲೀಸ್ ಠಾಣೆ ಸಮೀಪದ ಬಿಜೈ ರಸ್ತೆಯ ಬಳಿ ಗೋಡೆಯೊಂದರಲ್ಲಿ ಮತ್ತು ನ.29ರಂದು ಪಿವಿಎಸ್ ಸಮೀಪದ ನ್ಯಾಯಾಲಯದ ಆವರಣದ ಹಳೆ ಕಟ್ಟಡದ ಗೋಡೆಯ ಮೇಲೆ ಉಗ್ರರ ಪರವಾಗಿ ಗೋಡೆ ಬರಹ ಬರೆಯಲಾಗಿತ್ತು.     

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!