ಪ್ರಕರಣವನ್ನು ಸಿಐಡಿ ತನಿಖೆಗೆ ಒಳಪಡಿಸಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ತಾಯಿ

Prasthutha|

ಬೆಳಗಾವಿ: ನನ್ನ ಮಗನ ಆತ್ಮಹತ್ಯೆ ಪ್ರಕರಣದ ತನಿಖೆ ಸರಿಯಾಗಿ ನಡೆದಿಲ್ಲ. ಹಾಗಾಗಿ ಪ್ರಕರಣವನ್ನು ಸಿಐಡಿ ತನಿಖೆಗೆ ಒಳಪಡಿಸುವಂತೆ ಮನವಿ ಮಾಡಿದ್ದೇವೆ. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿದ್ದಾರೆ ಎಂದು ಗುತ್ತಿಗೆದಾರ ಸಂತೋಷ ಪಾಟೀಲ ಅವರ ತಾಯಿ ಪಾರ್ವತಿ ಹೇಳಿದ್ದಾರೆ.

- Advertisement -


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನನ್ನ ಮಗ ಸಂತೋಷನು ಈಶ್ವರಪ್ಪ ಅವರಿಗೆ ಕಮಿಷನ್ ಕೊಟ್ಟಿದ್ದೇವೆ ಎಂದಿದ್ದ. ಆದರೆ, ಈ ಪ್ರಕರಣದಲ್ಲಿ ಈಶ್ವರಪ್ಪ ಅವರಿಗೆ ಕ್ಲೀನ್ ಚಿಟ್ ಕೊಡಲಾಗಿದೆ. ನನ್ನ ಮಗನಿಗೆ ನ್ಯಾಯ ಸಿಕ್ಕಿಲ್ಲ’ ಎಂದು ಕಣ್ಣೀರು ಹಾಕಿದರು.

Join Whatsapp