Home ಟಾಪ್ ಸುದ್ದಿಗಳು ಪ್ರಕರಣವನ್ನು ಸಿಐಡಿ ತನಿಖೆಗೆ ಒಳಪಡಿಸಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ತಾಯಿ

ಪ್ರಕರಣವನ್ನು ಸಿಐಡಿ ತನಿಖೆಗೆ ಒಳಪಡಿಸಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ತಾಯಿ

ಬೆಳಗಾವಿ: ನನ್ನ ಮಗನ ಆತ್ಮಹತ್ಯೆ ಪ್ರಕರಣದ ತನಿಖೆ ಸರಿಯಾಗಿ ನಡೆದಿಲ್ಲ. ಹಾಗಾಗಿ ಪ್ರಕರಣವನ್ನು ಸಿಐಡಿ ತನಿಖೆಗೆ ಒಳಪಡಿಸುವಂತೆ ಮನವಿ ಮಾಡಿದ್ದೇವೆ. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿದ್ದಾರೆ ಎಂದು ಗುತ್ತಿಗೆದಾರ ಸಂತೋಷ ಪಾಟೀಲ ಅವರ ತಾಯಿ ಪಾರ್ವತಿ ಹೇಳಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನನ್ನ ಮಗ ಸಂತೋಷನು ಈಶ್ವರಪ್ಪ ಅವರಿಗೆ ಕಮಿಷನ್ ಕೊಟ್ಟಿದ್ದೇವೆ ಎಂದಿದ್ದ. ಆದರೆ, ಈ ಪ್ರಕರಣದಲ್ಲಿ ಈಶ್ವರಪ್ಪ ಅವರಿಗೆ ಕ್ಲೀನ್ ಚಿಟ್ ಕೊಡಲಾಗಿದೆ. ನನ್ನ ಮಗನಿಗೆ ನ್ಯಾಯ ಸಿಕ್ಕಿಲ್ಲ’ ಎಂದು ಕಣ್ಣೀರು ಹಾಕಿದರು.

Join Whatsapp
Exit mobile version