ಬೆಂಗಳೂರು: ರಾಜ್ಯದಲ್ಲಿ ನಡೆದ 545 ಪಿಎಸ್ ಐ ನೇಮಕಾತಿ ಲಿಖಿತ ಪರೀಕ್ಷೆಯಲ್ಲಿ ಅಕ್ರಮ ಎಸಗಿದ ಪ್ರಕರಣ ಸಂಬಂಧ ತನಿಖೆಗೆ ಸರ್ಕಾರವು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದಲ್ಲಿ ಸಮಿತಿ ರಚಿಸಿತ್ತು. ಅದರಂತೆ ತನಿಖೆ ನಡೆಸಿರುವ ಸಮಿತಿಯು ಇಂದು (ಜ.22) ರಂದು ಗೃಹಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತನಿಖಾ ವರದಿಯನ್ನು ನೀಡಿದೆ.
ಈ ವೇಳೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಉಪಸ್ಥಿತರಿದ್ದರು. ಬಿಜೆಪಿ ಸರ್ಕಾರದ ಅವಧಿಯಲ್ಲಿ 545 PSI ನೇಮಕಾತಿ ಲಿಖಿತ ಪರೀಕ್ಷೆಯಲ್ಲಿ ಅಕ್ರಮ ಎಸಗಲಾಗಿತ್ತು. ಮರು ತನಿಖೆ ನಡೆಸುವ ನಿಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರವು ಪ್ರಕರಣದ ಮರು ತನಿಖೆಗಾಗಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದಲ್ಲಿ ಸಮಿತಿ ರಚಿಸಿತ್ತು.