ಬೆಂಗಳೂರು: ತುಮಕೂರು ತಾಲೂಕಿನ ಕುಚ್ಚಂಗಿ ಕೆರೆಯ ಬಳಿ ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಬೆಳ್ತಂಗಡಿ ತಾಲೂಕಿನ ಮೂರು ಮಂದಿಯ ಹತ್ಯೆ ನಡೆದಿದ್ದು, ಘಟನೆ ಬಗ್ಗೆ ಸೂಕ್ತ ತನಿಖೆ ನಡೆಸಿ, ನೈಜ ವಿಷಯವನ್ನು ಸಾರ್ವಜನಿಕಗೊಳಿಸಬೇಕೆಂದು ಎಸ್ ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಹೇಳಿದ್ದಾರೆ.
ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ತುಮಕೂರಿನ ಬಳಿಯ ಹಳ್ಳಿ ಒಂದರಲ್ಲಿ, ಬೆಳ್ತಂಗಡಿ ಮೂಲದ ಮೂವರು ಕಾರೊಂದರಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇದು ಅತ್ಯಂತ ಆತಂಕಕಾರಿಯಾದ ಘಟನೆಯಾಗಿದೆ. ಅತೀ ಸಂಶಯಾಸ್ಪದ ಈ ಘಟನೆ ಬಗ್ಗೆ ಸೂಕ್ತ ತನಿಖೆ ನಡೆಸಿ, ನೈಜ ವಿಷಯವನ್ನು ಸಾರ್ವಜನಿಕಗೊಳಿಸಬೇಕೆಂದು ತುಮಕೂರು ಎಸ್ಪಿ ಮತ್ತು ಕರ್ನಾಟಕದ ಡಿಜಿಪಿಯವರಿಗೆ ಅಗ್ರಹಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಟಿ.ಬಿ ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್(45) , ಮದ್ದಡ್ಕ ನಿವಾಸಿ ಇಸಾಕ್(56) , ಶಿರ್ಲಾಲ್ ನಿವಾಸಿ ಇಮ್ತಿಯಾಝ್(34) ಅವರನ್ನು ತುಮಕೂರಿಗೆ ಕರೆಸಿ ಬೆಂಕಿ ಹಚ್ಚಿ ಕೊಲೆ ಮಾಡಲಾಗಿದೆ.