ಚೆನ್ನೈ : ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ವಿರುದ್ಧದ ಆದಾಯ ತೆರಿಗೆ ಇಲಾಖೆ ಜರುಗಿಸಬೇಕಿದ್ದ ಪ್ರಕ್ರಿಯೆಗಳನ್ನು ಮದ್ರಾಸ್ ಹೈಕೋರ್ಟ್ ಕೊನೆಗೊಳಿಸಿದೆ.
ಚೆನ್ನೈ ಬಳಿಯಿದ್ದ ಆಸ್ತಿಯ ಮಾರಾಟಕ್ಕೆ ಸಂಬಂಧಿಸಿದ 7 ಕೋಟಿ ರೂ. ಮೌಲ್ಯದ ಹಣಕಾಸು ವಹಿವಾಟನ್ನು ಮರೆಮಾಚಿ ಆದಾಯ ತೆರಿಗೆ ಪಾವತಿ ಮಾಡಿಲ್ಲ ಎಂದು ಆದಾಯ ತೆರಿಗೆ ಇಲಾಖೆ ಕಾರ್ತಿ ಮತ್ತು ಅವರ ಪತ್ನಿಯ ವಿರುದ್ಧ ಕ್ರಮ ಜರುಗಿಸಲು ಪ್ರಕ್ರಿಯೆಗೆ ಚಾಲನೆ ನೀಡಿತ್ತು.
ಇದನ್ನು ಪ್ರಶ್ನಿಸಿ ಕಾರ್ತಿ ದಂಪತಿ ಕೋರ್ಟ್ ಮೊರೆ ಹೋಗಿದ್ದರು. ಈಗಲೇ ಕ್ರಮ ಜರುಗಿಸುವ ಅಗತ್ಯವಿಲ್ಲ ಎಂದಿರುವ ಹೈಕೋರ್ಟ್, ಸಂಬಂಧಪಟ್ಟ ಅಧಿಕಾರಿಗಳು ಸರಿಯಾದ ಮೌಲ್ಯಮಾಪನ ಮಾಡಿದ ಬಳಿಕ, ಕ್ರಮ ಜರುಗಿಸುವುದು ಅಗತ್ಯವಿದ್ದಲ್ಲಿ ಕ್ರಮ ಕೈಗೊಳ್ಳಬಹುದು ಎಂದಿದೆ.