ನಿರ್ಮಾಪಕ ಚಂದ್ರಶೇಖರ್ ಮನೆಗೆ ಕನ್ನ: ಬಾಗಿಲು ಒಡೆದು ಲೂಟಿ

Prasthutha|

ಮಂಡ್ಯ: ಚಿತ್ರ ಸಿನಿಮಾ ನಿರ್ಮಾಪಕ ಚಂದ್ರಶೇಖರ್ ಅವರ ಮನೆಗೆ ಖದೀಮರು ಕನ್ನ ಹಾಕಿದ್ದಾರೆ. ಮಂಡ್ಯ ತಾಲೂಕಿನ ಹೊಸ ಬೂದನೂರು ಗ್ರಾಮದಲ್ಲಿ ಮನೆ ಬಾಗಿಲು ಮುರಿದು ಕಳ್ಳತನ ಮಾಡಿದ್ದಾರೆ.

- Advertisement -

ನಿರ್ಮಾಪಕ ಚಂದ್ರಶೇಖರ್ ಬೆಂಗಳೂರಿನಲ್ಲಿ ವಾಸವಾಗಿದ್ದರು. ಈ ಹಿನ್ನೆಲೆಯಲ್ಲಿ ಮನೆಗೆ ಬೀಗ ಹಾಕಲಾಗಿತ್ತು. ಇದನ್ಜು ಗಮನಿಸಿದ ಖದೀಮರು, ಬಾಗಿಲು ಮುರಿದು ಮನೆಯಲ್ಲಿ 3 ಲಕ್ಷ ರೂ. ನಗದು ಹಣ ಹಾಗೂ 35 ಗ್ರಾಂ ಚಿನ್ನ ದೋಚಿ ಪರಾರಿಯಾಗಿದ್ದಾರೆ.


ಇನ್ನು ಸ್ಥಳಕ್ಕೆ ಪೊಲೀಸರು, ಶ್ವಾನದಳ, ಬೆರಳಚ್ಚು ತಜ್ಞರು ಭೇಟಿ ಪರಿಶೀಲನೆ ಮಾಡಿದ್ದು, ಈ ಬಗ್ಗೆ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp