ಅಂಬೇಡ್ಕರ್ ಜಿಂದಾಬಾದ್ ವೀಡಿಯೋ ತಿರುಚಿದ ವ್ಯಕ್ತಿಯನ್ನು ಬಂಧಿಸದಿದ್ದರೆ ಜಿಲ್ಲೆಯಾದ್ಯಂತ ಹೋರಾಟ: ಪ್ರಗತಿಪರ ಚಿಂತಕರ ವೇದಿಕೆ

Prasthutha|

ಸಿದ್ದಾಪುರ: ಅಂಬೇಡ್ಕರ್ ಜಿಂದಾಬಾದ್ ಘೋಷಣೆಯ ವೀಡಿಯೋವನ್ನು ಪಾಕಿಸ್ತಾನ್ ಜಿಂದಾಬಾದ್ ಎಂದು ತಿರುಚಿ ಕೊಡಗು ಜಿಲ್ಲೆಯಲ್ಲಿ ಅಶಾಂತಿ ಸೃಷ್ಟಿಸಲು ಹುನ್ನಾರ ನಡೆಸಿರುವ ದುಷ್ಕರ್ಮಿಯನ್ನು ಬಂಧಿಸದಿದ್ದರೆ ಜಿಲ್ಲೆಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ಪ್ರಗತಿಪರ ಚಿಂತಕರ ವೇದಿಕೆ ಎಚ್ಚರಿಸಿದೆ.

- Advertisement -


ಸಿದ್ದಾಪುರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವೇದಿಕೆಯ ಪ್ರಮುಖರಾದ ಎಂ.ಬಿಜೋಯ್, ಪೊಲೀಸರ ಎದುರಲ್ಲೇ ಪಾಕಿಸ್ತಾನ್ ಘೋಷಣೆ ಕೂಗಿದ್ದಲ್ಲಿ ಪೊಲೀಸರು ಯಾಕೆ ಅವರನ್ನು ಬಂಧಿಸಿಲ್ಲ ಎಂದು ಪ್ರಶ್ನಿಸಿದ ಅವರು, ಮುಂದಿನ ಚುನಾವಣೆಯನ್ನು ಮುಂದಿಟ್ಟು ಬಿಜೆಪಿ ನಡೆಸುತ್ತಿರುವ ಹುನ್ನಾರವಾಗಿದೆ. ಹಾಗಾಗಿ ವೀಡಿಯೋ ತಿರುಚಿದ ವ್ಯಕ್ತಿಯ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.


ಪಿ.ವಿ ಜಾನ್ಸನ್ ಮಾತನಾಡಿ, ಕೊರೋನಾ ಸಂದರ್ಭದಲ್ಲಿ ಜಾತಿ, ಧರ್ಮ ನೋಡದೆ ಪ್ರತಿಯೊಬ್ಬರೂ ಪರಸ್ಪರ ಸಹಾಯ ಮಾಡುವ ಮೂಲಕ ಅನ್ಯೋನತೆಯಿಂದ ಬದುಕುತ್ತಿದ್ದಾರೆ. ಕಳೆದ ಕೆಲವು ದಿನಗಳಿಂದ ಸಂಘಪರಿವಾರದಿಂದ ಜಿಲ್ಲೆಯಲ್ಲಿ ಅಹಿತಕರ ಘಟನೆಗಳು ನಡೆಯುತ್ತಿದ್ದು, ಜಿಲ್ಲೆಯಲ್ಲಿ ಅಶಾಂತಿಯ ವಾತಾವರಣ ಸೃಷ್ಟಿಸುತ್ತಿದ್ದಾರೆ ಎಂದು ಆರೋಪಿಸಿದ ಅವರು, ವೀಡಿಯೋ ತಿರುಚಿದ ವ್ಯಕ್ತಿಯ ಮೇಲೆ ಸುಮೋಟೋ ಕೇಸ್ ದಾಖಲಿಸಬೇಕೆಂದು ಒತ್ತಾಯಿಸಿದರು.

- Advertisement -


ಮುಖಂಡ ಎಸ್.ಬಿ ಪ್ರತೀಶ ಮಾತನಾಡಿ, ಜಿಲ್ಲೆಯ ಅಧಿಕಾರಿಗಳು ಬಿಜೆಪಿ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಅವರು, ಜಿಲ್ಲಾಡಳಿತ ಕಾನೂನು ಸುವ್ಯವಸ್ಥೆ ಕಾಪಾಡುವ ಮೂಲಕ ಅಶಾಂತಿ ಸೃಷ್ಟಿಸುತ್ತಿರುವವರ ಮೇಲೆ ಕ್ರಮ ಕೈಗೊಳ್ಳದಿದ್ದಲ್ಲಿ ಮುಂದಿನ ದಿನಗಳಲ್ಲಿ ದೊಡ್ಡ ಅನಾಹುತ ನಡೆಯುವ ಸಾಧ್ಯತೆ ಇದೆ. ಇದಕ್ಕೆ ಜಿಲ್ಲಾಡಳಿತ ಕಾರಣಾವಾಗಲಿದೆ ಎಂದರು.


ಎಂ.ಎ ಯಮುನಾ ಮಾತನಾಡಿ, ಬೆಲೆ ಏರಿಕೆಯಿಂದಾಗಿ ಜನಸಾಮಾನ್ಯರು ಕಂಗಾಲಾಗಿರುವ ಸಂದರ್ಭದಲ್ಲಿ ಜನರ ದಿಕ್ಕು ತಪ್ಪಿಸಲು ಕ್ಷುಲ್ಲಕ ವಿಚಾರದಲ್ಲಿ ಜಿಲ್ಲೆಯಲ್ಲಿ ಅಶಾಂತಿ ಸೃಷ್ಟಿಸುತ್ತಿರುವವರ ಮೇಲೆ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ಇಲ್ಲದಿದ್ದಲ್ಲಿ ಸಮಾನ ಮನಸ್ಕರು ಮತ್ತು ಜಾತ್ಯತೀತ ಪಕ್ಷಗಳು ಒಟ್ಟು ಸೇರಿ ಜಿಲ್ಲೆಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು. ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಅಸ್ಕರ್, ಅಶ್ರಫ್, ಬಶೀರ್ ಮತ್ತು ಶುಕೂರ್ ಇದ್ದರು.


Join Whatsapp
Exit mobile version