ಮತಾಂತರ ನಿಷೇಧ ವಿಧೇಯಕ ವಿಧಾನಸಭೆಯಲ್ಲಿ ಮಂಡನೆಗೆ ಅನುಮೋದನೆ

Prasthutha|

ಬೆಳಗಾವಿ: ವಿವಾದಿತ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತರಲೇಬೇಕೆಂಬ ಹಠಕ್ಕೆ ಬಿದ್ದಿರುವ ಬಿಜೆಪಿ ಸರ್ಕಾರ, ಮತಾಂತರ ನಿಷೇಧದ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡನೆಗೆ ಸಚಿವ ಸಂಪುಟ ಒಪ್ಪಿಗೆ  ನೀಡಿದೆ.  ನಾಳೆ ವಿಧಾನಸಭೆಯಲ್ಲಿ ವಿಧೇಯಕ ಮಂಡನೆಯಾಗುವ ಸಾಧ್ಯತೆಯಿದೆ. 

- Advertisement -

ವಿಧೇಯಕಗಳಲ್ಲಿ ಕೆಲವೊಂದು ಬದಲಾವಣೆಗಳನ್ನು ಮಾಡಲಾಗಿದ್ದು, ಹೊಸ ಬದಲಾವಣೆಗಳೊಂದಿಗೆ ನಾಳೆ ವಿಧಾನಸಭೆಯಲ್ಲಿ ಮಂಡನೆಯಾಗಲಿದೆ.

ಇತ್ತೀಚೆಗೆ ಮತಾಂತರ ನಿಷೇಧ ಕಾಯ್ದೆ  ಜಾರಿಗೊಳಿಸದಂತೆ ಕ್ರೈಸ್ತ ಧರ್ಮಗುರುಗಳ ಒಕ್ಕೂಟವೊಂದು ಮುಖ್ಯಮಂತ್ರಿ ಬೊಮ್ಮಾಯಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿತ್ತು.



Join Whatsapp