ಮತಾಂತರ ನಿಷೇಧ ವಿಧೇಯಕ ವಿಧಾನಸಭೆಯಲ್ಲಿ ಮಂಡನೆಗೆ ಅನುಮೋದನೆ
Prasthutha: December 20, 2021

ಬೆಳಗಾವಿ: ವಿವಾದಿತ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತರಲೇಬೇಕೆಂಬ ಹಠಕ್ಕೆ ಬಿದ್ದಿರುವ ಬಿಜೆಪಿ ಸರ್ಕಾರ, ಮತಾಂತರ ನಿಷೇಧದ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡನೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ನಾಳೆ ವಿಧಾನಸಭೆಯಲ್ಲಿ ವಿಧೇಯಕ ಮಂಡನೆಯಾಗುವ ಸಾಧ್ಯತೆಯಿದೆ.
ವಿಧೇಯಕಗಳಲ್ಲಿ ಕೆಲವೊಂದು ಬದಲಾವಣೆಗಳನ್ನು ಮಾಡಲಾಗಿದ್ದು, ಹೊಸ ಬದಲಾವಣೆಗಳೊಂದಿಗೆ ನಾಳೆ ವಿಧಾನಸಭೆಯಲ್ಲಿ ಮಂಡನೆಯಾಗಲಿದೆ.
ಇತ್ತೀಚೆಗೆ ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸದಂತೆ ಕ್ರೈಸ್ತ ಧರ್ಮಗುರುಗಳ ಒಕ್ಕೂಟವೊಂದು ಮುಖ್ಯಮಂತ್ರಿ ಬೊಮ್ಮಾಯಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿತ್ತು.
