Home ಟಾಪ್ ಸುದ್ದಿಗಳು ಮಧ್ಯಪ್ರದೇಶ | ದರ್ಗಾದ ಬಳಿ ವಿಗ್ರಹ ಪ್ರತಿಷ್ಠಾಪನೆ: ನಿಷೇಧಾಜ್ಞೆ ಹೇರಿದ ಜಿಲ್ಲಾಡಳಿತ

ಮಧ್ಯಪ್ರದೇಶ | ದರ್ಗಾದ ಬಳಿ ವಿಗ್ರಹ ಪ್ರತಿಷ್ಠಾಪನೆ: ನಿಷೇಧಾಜ್ಞೆ ಹೇರಿದ ಜಿಲ್ಲಾಡಳಿತ

ಭೋಪಾಲ್: ಮಧ್ಯಪ್ರದೇಶದ ದರ್ಗಾವೊಂದರ ಬಳಿ ವಿಗ್ರಹ ಪ್ರತಿಷ್ಠಾಪನೆಗೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಉಂಟಾದ ಘರ್ಷಣೆಯ ಹಿನ್ನೆಲೆಯಲ್ಲಿ ನೀಮಚ್ ಎಂಬಲ್ಲಿ ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿಗೊಳಿಸಿದೆ. ಸ್ಥಳದಲ್ಲಿ ಬಿಗುವಿನ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ.

ಸೋಮವಾರ ರಾತ್ರಿ ಉಭಯ ಗುಂಪುಗಳ ನಡುವೆ ವಾಗ್ವಾದ ಉಂಟಾಗಿದೆ ಮತ್ತು ಪರಸ್ಪರ ಕಲ್ಲು ತೂರಾಟ ನಡೆಸಿದ್ದಾರೆ. ಈ ನಿಟ್ಟಿನಲ್ಲಿ ಆಕ್ರೋಶಿತ ಗುಂಪನ್ನು ಚದುರಿಸಲು ಅಶ್ರುವಾಯು ಶೆಲ್ ಪ್ರಯೋಗಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ನೀಮಚ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಿಆರ್‌ಪಿಸಿ ಸೆಕ್ಷನ್ 144 ನಿಷೇಧಾಜ್ಞೆ ವಿಧಿಸಲಾಗಿದೆ ಎಂದು ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ನೇಹಾ ಮೀನಾ ತಿಳಿಸಿದ್ದಾರೆ.

ಒಟ್ಟು ನಾಲ್ಕು ಪ್ರಕರಣಗಳನ್ನು ದಾಖಲಿಸಲಾಗಿದೆ ಮತ್ತು 9 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಸೂರಜ್ ಕುಮಾರ್ ವರ್ಮಾ ಸುದ್ದಿಗಾರರಿಗೆ ತಿಳಿಸಿದ್ದಾರೆ. ಘಟನೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಗಾಯಗೊಂಡಿದ್ದಾರೆ ಎಂದೂ ತಿಳಿಸಿದ್ದಾರೆ. ದರ್ಗಾದ ಬಳಿ ಹನುಮಾನ್ ವಿಗ್ರಹವನ್ನು ಪ್ರತಿಷ್ಠಾಪನೆ ಮಾಡಿದ ಹಿನ್ನೆಲೆಯಲ್ಲಿ ಉಭಯ ಗುಂಪುಗಳು ನಡುವೆ ವಾಗ್ವಾದ ಉಂಟಾಗಿದೆ ಎಂದು ಅವರು ತಿಳಿಸಿದ್ದಾರೆ.

Join Whatsapp
Exit mobile version