ಬೆಂಗಳೂರಿನಲ್ಲಿ ಇಂದು ಸಂಜೆ 6 ರಿಂದ ಶನಿವಾರ ಬೆಳಗ್ಗೆ 5 ಗಂಟೆ ವರೆಗೆ ನಿಷೇಧಾಜ್ಞೆ ಜಾರಿ: ಕಮಲ್ ಪಂತ್ ಆದೇಶ

Prasthutha|

- Advertisement -

ಬೆಂಗಳೂರು: ನಗರದಲ್ಲಿ ಇಂದು (ಡಿಸೆಂಬರ್ 31) ಸಂಜೆ 6 ಗಂಟೆಯಿಂದ ನಾಳೆ (ಜನವರಿ 1) ಬೆಳಗ್ಗೆ 5 ಗಂಟೆವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಡಿಸೆಂಬರ್ 31ರ ಸಂಜೆ 6 ರಿಂದ ಜನವರಿ 1ರ ಮುಂಜಾನೆ 5 ಗಂಟೆ ವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ. ಪ್ರಮುಖ ರಸ್ತೆ, ವೃತ್ತಗಳಲ್ಲಿ 5 ಕ್ಕಿಂತ ಹೆಚ್ಚು ಜನರು ಸೇರುವಂತಿಲ್ಲ ಎಂದು ತಿಳಿಸಲಾಗಿದೆ.

ಬೆಂಗಳೂರು ನಗರದಲ್ಲಿ ಇಂದು ಸಂಜೆ 6 ಗಂಟೆಯಿಂದ ನಿರ್ಬಂಧವಿದೆ. ಹೊಸ ವರ್ಷಾಚರಣೆ ಹೆಸರಿನಲ್ಲಿ ಹೆಚ್ಚು ಜನರ ಸೇರಬಾರದು. ರಾತ್ರಿ 10 ಗಂಟೆಯಿಂದ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ವಿಧಾನಸೌಧದಲ್ಲಿ ಗೃಹ ಖಾತೆ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದಾರೆ. ಕರ್ನಾಟಕ ಸೇರಿ 8 ರಾಜ್ಯಗಳಲ್ಲಿ ಕೊರೊನಾ ಸ್ಫೋಟವಾಗಿದೆ. ಕೊರೊನಾ ಸೋಂಕು ಹರಡದಂತೆ ತಡೆಯಲು ನಿರ್ಬಂಧ ವಿಧಿಸಲಾಗುತ್ತಿದೆ. ಕೇಂದ್ರ ಸರ್ಕಾರದ ನಿರ್ದೇಶನದಂತೆ ನಿರ್ಬಂಧ ಹಾಕಲಾಗಿದೆ. ಜನರು ತಮ್ಮ ಮನೆಗಳಲ್ಲೇ ಹೊಸವರ್ಷಾಚರಣೆ ಮಾಡಬೇಕು ಎಂದು ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

- Advertisement -

ಹೊಸವರ್ಷಕ್ಕೆ ಕೌಂಟ್ ಡೌನ್ ನಡುವೆ ಬ್ರಿಗೇಡ್ ರೋಡ್ ಹಾಗೂ ಚರ್ಚ್ ಸ್ಟ್ರೀಟ್ ನಲ್ಲಿ ಸಿಸಿ ಕ್ಯಾಮರಾಗಳ ಅಳವಡಿಕೆ ಮಾಡಲಾಗಿದೆ. ಹೆಜ್ಜೆ ಹೆಜ್ಜೆಗೂ ಬ್ಯಾರಿಕೇಡ್ ಹಾಕಲು ವ್ಯವಸ್ಥೆ ಮಾಡಲಾಗಿದೆ.

Join Whatsapp