ಈಡೇರಿದ ಭರವಸೆ: ಸಿಎಂಗೆ ಧನ್ಯವಾದ ತಿಳಿಸಿದ ಕೆಯುಡಬ್ಲ್ಯೂಜೆ

Prasthutha|

ಬೆಂಗಳೂರು: ದಾವಣಗೆರೆಯಲ್ಲಿ ಫೆ.3 ಮತ್ತು 4 ರಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಆಯೋಜಿಸಿದ್ದ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ನೀಡಿದ್ದ ಭರವಸೆಯನ್ನು ಈಡೇರಿಸಿದಕ್ಕಾಗಿ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ.

- Advertisement -

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ಸರ್ಕಾರ ಬಜೆಟ್ ನಲ್ಲಿ ಪ್ರಕಟಿಸಿದ್ದು ದಶಕಗಳ ಕನಸು ನನಸಾಗಿದೆ ಎಂದು ಅವರು ಹೇಳಿದ್ದಾರೆ.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬೇಡಿಕೆಯಾದ ಪತ್ರಕರ್ತರ ಉಚಿತ ಬಸ್ ಪಾಸ್ ಸೌಲಭ್ಯವನ್ನು ಈಡೇರಿಸಿರುವ ಸಿಎಂ ಸಿದ್ದರಾಮಯ್ಯ ಅವರನ್ನು ವಿಧಾನಸೌಧದಲ್ಲಿ ಭೇಟಿ ಮಾಡಿದ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಸಮಸ್ತ ಪತ್ರಕರ್ತರ ಪರವಾಗಿ ಧನ್ಯವಾದ ಸಲ್ಲಿಸಿದ್ದಾರೆ.

- Advertisement -

ಕೆಯುಡಬ್ಲ್ಯುಜೆ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ, ಕಾರ್ಯದರ್ಶಿ ಸೋಮಶೇಖರ ಕೆರಗೋಡು, ಬೆಂಗಳೂರು ಘಟಕದ ಸೋಮಶೇಖರ ಗಾಂಧಿ, ಶಿವರಾಜ ಮತ್ತಿತರರು ಜೊತೆಗಿದ್ದರು.

Join Whatsapp