ಬೆಂಗಳೂರು:ಶಬ್ದ ಮಾಲಿನ್ಯ ಉಂಟು ಮಾಡುವ ಎಲ್ಲಾ ಚಟುವಟಿಕೆ ಗಳನ್ನು ನಿಯಂತ್ರಿಸಲು, ನ್ಯಾಯಾಲಯಗಳ ಆದೇಶದಂತೆ, ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳ ಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನ್ಯಾಯಾಲಯದ ಆದೇಶವನ್ನು, ಎಲ್ಲರೂ ಗೌರವಿಸಬೇಕು. ಕಾನೂನನ್ನು ಕೈಗೆ ತೆಗೆದುಕೊಳ್ಳುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲು, ಹಿಂಜರಿಯುವುದಿಲ್ಲ ಎಂದರು.