ದಾವಣಗೆರೆ: ಆಸ್ತಿ ವಿಚಾರವಾಗಿ ಅಣ್ಣನನ್ನು ತಮ್ಮ ಚಾಕುನಿಂದ ಚುಚ್ಚಿ ಕೊಲೆ ಮಾಡಿರುವ ಘಟನೆ ಹರಿಹರದಲ್ಲಿ ನಡೆದಿದೆ
ಪ್ರಶಾಂತ್ ನಗರದ ನಿವಾಸಿ ಕೆ.ಜಿ ಕುಮಾರ (31) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ.
ಹರಿಹರದ ಗುಂಡಪ್ಪ ಎಂಬುವರಿಗೆ ಇಬ್ಬರು ಪತ್ನಿಯರಿದ್ದು ನಗರದ ಭರಂಪುರ ನಿವಾಸಿ ಎರಡನೇ ಪತ್ನಿ ರತ್ನಮ್ಮನ ಪುತ್ರ ರಾಜು ಹಾಗೂ ಮೊದಲನೇ ಪತ್ನಿ ಲಕ್ಷಮ್ಮ ಕೊನೆಯ ಮಗನಾದ ಕುಮಾರ್ ನಡುವೆ ಆಸ್ತಿ ವಿಚಾರದಲ್ಲಿ ನ್ಯಾಯಾಲಯದಲ್ಲಿ ದಾವೆ ನಡೆಯುತ್ತಿತ್ತು.
ಇವರಿಬ್ಬರ ಮಧ್ಯೆ ಮನಸ್ತಾಪವಿದ್ದು ಪದೇ ಪದೇ ಸಣ್ಣಪುಟ್ಟ ಜಗಳ ನಡೆಯುತ್ತಿತ್ತು. ಆದರೆ ನಿನ್ನೆ ರಾತ್ರಿ ಜಗಳ ವಿಕೋಪಕ್ಕೆ ತಿರುಗಿ ಕುಮಾರ ನನ್ನು ರಾಜು ಹತ್ಯೆ ಮಾಡಿದ್ದಾರೆ.