Home ರಾಜ್ಯ ಪ್ರವಾದಿ, ಇಸ್ಲಾಂ ವಿರುದ್ಧ ಅವಹೇಳನ ಮಾಡಿದ ಪ್ರೊ. ರಾಮಚಂದ್ರಯ್ಯರನ್ನು ವಜಾಗೊಳಿಸಿ, ಪಬ್ಲಿಕೇಶನ್ ವಿರುದ್ಧ ಕ್ರಮಕೈಗೊಳ್ಳಿ: ಕ್ಯಾಂಪಸ್...

ಪ್ರವಾದಿ, ಇಸ್ಲಾಂ ವಿರುದ್ಧ ಅವಹೇಳನ ಮಾಡಿದ ಪ್ರೊ. ರಾಮಚಂದ್ರಯ್ಯರನ್ನು ವಜಾಗೊಳಿಸಿ, ಪಬ್ಲಿಕೇಶನ್ ವಿರುದ್ಧ ಕ್ರಮಕೈಗೊಳ್ಳಿ: ಕ್ಯಾಂಪಸ್ ಫ್ರಂಟ್

ತುಮಕೂರು: ರಾಜ್ಯದ ಎಲ್ಲಾ ವಿಶ್ವವಿದ್ಯಾನಿಲಯಗಳಿಗೆ ಅನ್ವಯಗೊಂಡ ಬಿಎಡ್ ಮೂರನೇ ಸೆಮಿಸ್ಟರ್ ಮೌಲ್ಯಾಧಾರಿತ ಶಿಕ್ಷಣದ ಹೆಸರಿನಲ್ಲಿರುವ ಪಠ್ಯಪುಸ್ತಕದಲ್ಲಿ ಇಸ್ಲಾಂ ಧರ್ಮ ಮತ್ತು ಮುಸ್ಲಿಮರು, ಪ್ರವಾದಿ ಮುಹಮ್ಮದ್ (ಸ) ರವರ ಕುರಿತು ಪೂರ್ವಗ್ರಹಪೀಡಿತ, ಅವಹೇಳನಕಾರಿ ಅಂಶಗಳನ್ನು ಬರೆದ ಪ್ರೊಫೆಸರ್ ಬಿ.ಆರ್ ರಾಮಚಂದ್ರಯ್ಯ ವಿರುದ್ಧ ತುಮಕೂರಿನ ಹೊಸ ಬಡಾವಣೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿ, ಆರೋಪಿಯನ್ನು ಬಂಧಿಸಿರುವುದನ್ನು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿಯು ಸ್ವಾಗತಿಸುತ್ತಿದೆ ಎಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ರಾಜ್ಯ ಉಪಾಧ್ಯಕ್ಷ ಅಡ್ವೊಕೇಟ್ ರೋಶನ್ ನವಾಝ್ ತಿಳಿಸಿದ್ದಾರೆ.


ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತುಮಕೂರಿನ ಕಾಲೇಜೊಂದರ ಸಹಾಯಕ ಪ್ರಾಧ್ಯಾಪಕ ಬಿ.ಆರ್ ರಾಮಚಂದ್ರಯ್ಯ ಎಂಬವರು ಬರೆದಿರುವ ಮೈಸೂರಿನ ವಿಸ್ಮಯ ಪ್ರಕಾಶನ ಪ್ರಕಟಿಸಿರುವ “ಮೌಲ್ಯ ದರ್ಶನ ದಿ ಎಸ್ಸೆನ್ಸ್ ಆಫ್ ವ್ಯಾಲ್ಯೂ ಎಜುಕೇಶನ್” ಎಂಬ ಆಂಗ್ಲ ಕೃತಿಯಲ್ಲಿ ಇಸ್ಲಾಂ, ಮುಸ್ಲಿಮರನ್ನು ಮತ್ತು ಪ್ರವಾದಿ ಮುಹಮ್ಮದ್ (ಸ) ರವರನ್ನು ನಿಂದಿಸಲಾಗಿದೆ. ಈ ಕೃತಿಯನ್ನು ರಾಜ್ಯದ ಎಲ್ಲಾ ವಿಶ್ವವಿದ್ಯಾನಿಲಯಗಳು ಕೂಡ ಬಿಎಡ್ ಮೂರನೇ ಸೆಮಿಸ್ಟರ್ ಪಠ್ಯಪುಸ್ತಕವಾಗಿ ಆಯ್ಕೆಮಾಡಿಕೊಂಡಿದೆ.
ಉದ್ದೇಶಪೂರ್ವಕರಾಗಿ ಕೋಮುಭಾವನೆಯನ್ನು ಕೆರಳಿಸಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಯತ್ನಿಸಿದ ಲೇಖಕ ಹಾಗೂ ವಿಸ್ಮಯ ಪಬ್ಲಿಕೇಶನ್ ವಿರುಧ್ದ ಕ್ಯಾಂಪಸ್ ಫ್ರಂಟ್ ವಿದ್ಯಾರ್ಥಿಗಳು ನೀಡಿದ ದೂರಿನನ್ವಯ ಇದೀಗ ತುಮಕೂರಿನ ಹೊಸ ಬಡಾವಣೆ ಪೋಲಿಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಿಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗೆ ಕಠಿಣ ಕಾನೂನು ಕ್ರಮ ಜರುಗಿಸಬೇಕು ಹಾಗೂ ಇದೀಗಾಗಲೇ ಚಲಾವಣೆಯಲ್ಲಿರುವ ಬಿಎಡ್ ಮೂರನೇ ಸೆಮಿಸ್ಟರ್ ಮೌಲ್ಯ ಶಿಕ್ಷಣ ಎಂಬ ಈ ಪುಸ್ತಕವನ್ನು ತಕ್ಷಣ ಸ್ಥಗಿತಗೊಳಿಸಿ, ಸಂಪೂರ್ಣವಾಗಿ ನಾಶಗೊಳಿಸಬೇಕು ಹಾಗೂ ಅವರನ್ನು ಪ್ರೊಫೆಸರ್ ಹುದ್ದೆಯಿಂದ ತಕ್ಷಣ ವಜಾಗೊಳಿಸಬೇಕು ಮತ್ತು ವಿಸ್ಮಯ ಪಬ್ಲಿಕೇಶನ್ ವಿರುದ್ಧ ಕಠಿಣ ಕಾನೂನು ಕ್ರಮ ತಗೆದುಕೊಂಡು ಪರವಾನಿಗೆ ರದ್ದುಗೊಳಿಸಬೇಕೆಂದು ಅವರು ಆಗ್ರಹಿಸಿದರು.


ಕ್ಯಾಂಪಸ್ ಫ್ರಂಟ್ ಜಿಲ್ಲಾ ಮುಖಂಡ ಮುಹಮ್ಮದ್ ಅಝರ್, ಕ್ಯಾಂಪಸ್ ಫ್ರಂಟ್ ತುಮಕೂರು ಜಿಲ್ಲಾಧ್ಯಕ್ಷ ತೌಫೀಕ್, ತುಮಕೂರು ಜಿಲ್ಲಾ ಕಾರ್ಯದರ್ಶಿ ಅರ್ಮಾನ್ ಉಪಸ್ಥಿತರಿದ್ದರು.

Join Whatsapp
Exit mobile version