ಬೆಂಗಳೂರು: ರಾಜ್ಯಪಾಲರು ತಮ್ಮ ಮುಂದೆ ಬಾಕಿ ಇರುವ ಇತರ ಪ್ರಕರಣಗಳಲ್ಲೂ ವಿಚಾರಣೆಗೆ ಅನುಮತಿ ನೀಡುವಂತೆ ಒತ್ತಾಯಿಸಿ ಕಾಂಗ್ರೆಸ್ ಪಕ್ಷ ಶನಿವಾರ ‘ರಾಜಭವನ ಚಲೋ’ ನಡೆಸಿತು.
ಆ ಮೂಲಕ ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿದ ಸಂದರ್ಭದಲ್ಲಿ ಸರ್ಕಾರ ಮತ್ತು ಕಾಂಗ್ರೆಸ್ ಪಕ್ಷವು ರಾಜಭವನದ ವಿರುದ್ಧ ಮತ್ತೊಂದು ಸುತ್ತಿನ ಸಂಘರ್ಷ ನಡೆಸಿದೆ.
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವ ಮುರುಗೇಶ್ ನಿರಾಣಿ, ಶಾಸಕರಾದ ಶಶಿಕಲಾ ಜೊಲ್ಲೆ ಮತ್ತು ಜನಾರ್ದನ ರೆಡ್ಡಿ ಅವರಿಗೆ ಸಂಬಂಧಿಸಿದ ಪ್ರಕರಣಗಳಲ್ಲಿಯೂ ರಾಜ್ಯಪಾಲರು ವಿಚಾರಣೆಗೆ ಅನುಮತಿ ನೀಡಬೇಕು ಎಂದು ಮನವಿ ಮಾಡಲು ವಿಧಾನಸೌಧದ ಗಾಂಧಿ ಪ್ರತಿಮೆ ಬಳಿಯಿಂದ ಕಾಂಗ್ರೆಸ್ ಪಕ್ಷದ ನಾಯಕರು ರಾಜಭವನಕ್ಕೆ ಕಾಲ್ಗಡಿಗೆಯಲ್ಲಿ ತೆರಳಿದರು.