ಉಳ್ಳಾಲದಲ್ಲಿ ವೇಶ್ಯಾವಾಟಿಕೆ ದಂಧೆ: ಮಹಿಳೆ ಸೇರಿ ನಾಲ್ವರ ಬಂಧನ

Prasthutha|

ಉಳ್ಳಾಲ: ವೇಶ್ಯಾವಾಟಿಕೆ ದಂಧೆಯನ್ನು ಭೇದಿಸಿರುವ ಉಳ್ಳಾಲ ಪೊಲೀಸರು, ಮಹಿಳೆ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಿ ಮೂರು ದ್ವಿ ಚಕ್ರ ವಾಹನ, 9 ಮೊಬೈಲ್ ಫೋನ್, 5 ಸಾವಿರ ರೂ. ನಗದು ಸೇರಿದಂತೆ ಒಟ್ಟು 1.76 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

- Advertisement -


ಬಂಟ್ವಾಳದ ಬೋಳಂತೂರು ವಿಟ್ಲಕೋಡಿ ನಿವಾಸಿ ರುಕಿಯಾ (50), ಉಳ್ಳಾಲ ಸುಭಾಶ್ ನಗರ, ಕಡಪರ ನಿವಾಸಿ ಅಬ್ದುಲ್ ಶಮೀರ್ (30), ಬೆಳ್ತಂಗಡಿ ಕಾಣಿಯೂರು ನೋಂಡಿಲ್ ಕಜೆ ಮನೆ ನಿವಾಸಿ ಅಬ್ದುಲ್ ರಝಾಕ್ ಉಸ್ಮಾನ್ (45) ಹಾಗೂ ಉಳ್ಳಾಲ ಅಕ್ಕರೆಕೆರೆ ಮಿಲಾಸ್ ಪ್ಲಾಟ್ ನಿವಾಸಿ ಮುಹಮ್ಮದ್ ಇಬ್ರಾಹೀಂ (38) ಬಂಧಿತ ಆರೋಪಿಗಳು. ಲತೀಫ್ ಎಂಬಾತ ತಲೆಮರೆಸಿಕೊಂಡಿದ್ದಾನೆ ಎಂದು ಉಳ್ಳಾಲ ಪೊಲೀಸರು ತಿಳಿಸಿದ್ದಾರೆ.


ಉಳ್ಳಾಲದ ಪೆರ್ಮನ್ನೂರು ಗ್ರಾಮದ ಪಂಡಿತ್ ಹೌಸ್ ವಿಜೇತ ನಗರದಲ್ಲಿರುವ ಯಾನ್ವಿ ಎಂಬ ಹೆಸರಿನ ಮನೆಯಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಪಡೆದ ಉಳ್ಳಾಲ ಪೊಲೀಸರು, ನ್ಯಾಯಾಲಯದಿಂದ ಸರ್ಚ್ ವಾರಂಟ್ ಪಡೆದು ದಾಳಿ ನಡೆಸಿದಾಗ ವೇಶ್ಯಾವಾಟಿಕೆ ದಂಧೆ ಬೆಳಕಿಗೆ ಬಂದಿದೆ. ಈ ಸಂಬಂಧ ರುಕಿಯಾ ಮತ್ತು ಲತೀಫ್ ಎಂಬವರ ವಿರುದ್ಧ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಯಿತು. ರುಕಿಯಾಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆರೋಪಿ ಲತೀಫ್ ತಲೆಮರೆಸಿಕೊಂಡಿದ್ದಾನೆ.

- Advertisement -


ದಾಳಿಯ ವೇಳೆ 3 ದ್ವಿಚಕ್ರ ವಾಹನಗಳು, 9 ಮೊಬೈಲ್ ಫೋನ್’ಗಳು, 5000 ರೂ.ನಗದು ಸೇರಿ ಒಟ್ಟು 1,76,580 ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮಂಗಳೂರು ದಕ್ಷಿಣ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ಉಳ್ಳಾಲ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಸಂದೀಪ್ ಜಿ.ಎಸ್ ಹಾಗೂ ಪಿಎಸ್’ಐ ಮಂಜುಳಾ, ಸಿಬ್ಬಂದಿಗಳಾದ ಮಂಜುನಾಥ್, ವಾಸುದೇವ, ಚವ್ಹಾಣ್, ದಾಕ್ಷಾಯಿಣಿ, ಲಕ್ಷ್ಮೀ, ಎಸಿಪಿ ಸ್ಕ್ವಾಡ್ ಸಿಬ್ಬಂದಿ ರೆಜಿ ಭಾಗವಹಿಸಿದ್ದರು.

Join Whatsapp