Home ಟಾಪ್ ಸುದ್ದಿಗಳು ಪ್ರವಾದಿ ನಿಂದನೆ ವಿರುದ್ಧ ಕರ್ನಾಟಕದಲ್ಲೂ ಪ್ರತಿಭಟನೆ : ನಿಂದನಾಕಾರರ ಬಂಧನಕ್ಕೆ ಕೂಗು

ಪ್ರವಾದಿ ನಿಂದನೆ ವಿರುದ್ಧ ಕರ್ನಾಟಕದಲ್ಲೂ ಪ್ರತಿಭಟನೆ : ನಿಂದನಾಕಾರರ ಬಂಧನಕ್ಕೆ ಕೂಗು

ಬೆಂಗಳೂರು : ಇತ್ತೀಚೆಗೆ ಸುದ್ದಿವಾಹಿನಿಯ ಚರ್ಚೆ ವೇಳೆ ಪ್ರವಾದಿ ಮೊಹಮ್ಮದ್‌ ಪೈಗಂಬರ್‌ ಅವರ ವಿರುದ್ಧ ನಿಂದನಾತ್ಮಕ ಹೇಳಿಕೆ ನೀಡಿರುವ ಬಿಜೆಪಿಯ ನೂಪುರ್‌ ಶರ್ಮಾ, ನವೀನ್‌ ಜಿಂದಾಲ್‌ ಮತ್ತು ರಾಜಾ ಸಿಂಗ್‌ ಅವರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ಶುಕ್ರವಾರ ರಾಜ್ಯದ ಕೆಲವೆಡೆ ವಿವಿಧ ಮುಸ್ಲಿಂಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಇದೇವೇಳೆ ಬೆಳಗಾವಿಯಲ್ಲಿ ನೂಪುರ್‌ ಶರ್ಮಾ ಅವರ ಪ್ರತಿಕೃತಿಯನ್ನು ನಡುರಸ್ತೆಯಲ್ಲೇ ನೇತು ಹಾಕಿ ಜನರು ಪ್ರತಿಭಟಿಸಿದ್ದಾರೆ.

ಪ್ರವಾದಿ ಮೊಹಮ್ಮದ್‌ ಅವರನ್ನು ನಿಂದಿಸಿದವರನ್ನು ಬಂಧಿಸಿ ಕಠಿಣ ಕ್ರಮವನ್ನು ಕೈಗೊಳ್ಳಬೇಕೇಂದು ಆಗ್ರಹಿಸಿ ಸೋಶಿಯಲ್‌ ಡೆಮೆಕ್ರಾಟಿಕ್‌ ಪಾರ್ಟಿ ಆಫ್‌ ಇಂಡಿಯಾ(ಎಸ್‌ಡಿಪಿಐ) ಸೇರಿದಂತೆ ವಿವಿಧ ಸಂಘಟನೆಗಳ ಕಾರ್ಯಕರ್ತರು ಬೆಳಗಾವಿ, ವಿಜಯಪುರ, ಕಲಬುರಗಿ, ಯಾದಗಿರಿ, ಶಿವಮೊಗ್ಗ, ಮೈಸೂರು, ಚಾಮರಾಜನಗರ, ರಾಮನಗರ, ಚಿತ್ರದುರ್ಗ, ಹೊಸಪೇಟೆ, ಪುತ್ತೂರು ಸೇರಿದಂತೆ ವಿವಿಧೆಡೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ, ತಹಶೀಲ್ದಾರ್‌ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.

Join Whatsapp
Exit mobile version