ಪ್ರವಾದಿ ವಿರುದ್ಧ ಅವಹೇಳನಕಾರಿ ಹೇಳಿಕೆ ಖಂಡಿಸಿ ಪ್ರತಿಭಟನೆ: ಪ್ರತಿಭಟನಕಾರರ ಮೇಲೆ ಕಲ್ಲು ತೂರಾಟ

Prasthutha|

ಕಾನ್ಪುರ: ಪ್ರವಾದಿ ಮುಹಮ್ಮದ್ ಅವರ ವಿರುದ್ಧ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ನೀಡಿದ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿ ಉತ್ತರ ಪ್ರದೇಶದ ಕಾನ್ಪುರದಲ್ಲಿ ಶುಕ್ರವಾರ ಮುಸ್ಲಿಮ್ ಸಂಘಟನೆಗಳು ನಡೆಸಿದ ಪ್ರತಿಭಟನೆಯ ವೇಳೆ ಪ್ರತಿಭಟನಕಾರರ ಮೇಲೆ ಕಲ್ಲು ತೂರಾಟ ನಡೆಸಿದ್ದು, ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ.

- Advertisement -

ಬೆಕೊಂಗಂಜ್ ಎಂಬಲ್ಲಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸರು ಲಾಠಿಚಾರ್ಚ್ ನಡೆಸಿದ ಬಳಿಕ ಹಿಂಸಾಚಾರ ಭುಗಿಲೆದ್ದಿದೆ. ಅಲ್ಲದೆ ಎರಡೂ ತಂಡಗಳು ಪರಸ್ಪರ ಕಲ್ಲು ತೂರಾಟ ನಡೆಸುತ್ತಿರುವ ದೃಶ್ಯಾವಳಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಸದ್ಯ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಕಾನ್ಪುರ ಜಿಲ್ಲಾ ಮ್ಯಾಜಿಸ್ಟ್ರೇಟ್ ನೇಹಾ ಶರ್ಮಾ ತಿಳಿಸಿದ್ದಾರೆ.

ಸ್ಥಳದಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದ್ದು, ಘಟನೆಯಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಜರುಗಿಸಲಾಗುವುದೆಂದು ಅವರು ತಿಳಿಸಿದ್ದಾರೆ.

- Advertisement -

ಮೇ 26 ರಂದು ಮಸೀದಿ-ಕಾಶಿ ವಿಶ್ವನಾಥ ದೇವಾಲಯ ವಿವಾದದ ಮಧ್ಯೆ ಬಿಜೆಪಿ ನಾಯಕಿ ಅವರು ಕಾರ್ಯಕ್ರಮವೊಂದರಲ್ಲಿ ಪ್ರವಾದಿ ಮುಹಮ್ಮದ್ ಕುರಿತು ಆಕ್ಷೇಪಾರ್ಹ ಹೇಳಿಕೆಯನ್ನು ನೀಡಿದ್ದರು.

Join Whatsapp