ಎಲ್ಲರಿಗೂ ಸೇರಿದ ಭೂಮಿಯನ್ನು ಕೆಲವೇ ಜನರ ಕೈಗೆ ಕೊಡಲು ಕಾನೂನು ಮಾಡುತ್ತಿರುವ ಸರ್ಕಾರ | ನೂರ್ ಶ್ರೀಧರ್

Prasthutha: September 22, 2020

ಜನ ಚಳವಳಿಗಳ ಪರ್ಯಾಯ ಜನತಾ ಅಧಿವೇಶನ

ಅಧಿವೇಶನದಲ್ಲಿ ಮಾತನಾಡಿದ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ನೂರ್ ಶ್ರೀಧರ್, ಕರ್ನಾಟಕದ ಸಮಸ್ತ ಭೂಮಿಯನ್ನು ಉಳಿಸದ ಹೊರತು, ನಮ್ಮ ಭೂಮಿಯನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ. ಸರ್ಕಾರೀ ಉದ್ಯಮಗಳ ಖಾಸಗೀಕರಣ ಆಯ್ತು, ವಿಮಾನ ನಿಲ್ದಾಣದ ಖಾಸಗೀಕರಣ ಆಯ್ತು, ರೈಲು ಖಾಗೀಕರಣ ಆಯ್ತು. ಈಗ ಸರ್ಕಾರ ಭೂಮಿಯ ಖಾಸಗೀಕರಣ ಮಾಡಲು ಹೊರಟಿದೆ. ಇದು ಎಲ್ಲರಿಗೂ ಸೇರಿದ ಭೂಮಿಯನ್ನು ಕೆಲವೇ ಜನರ ಕೈಗೆ ಕೊಡಲು ಕಾನೂನು ಮಾಡುತ್ತಿರುವ ಸರ್ಕಾರದ ಮತ್ತು ಆಳುವ ವರ್ಗದ ನೀಚಾತಿ ನೀಚ ಕೆಲವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಸರಕಾರಗಳ ರೈತ, ದಲಿತ ಹಾಗೂ ಕಾರ್ಮಿಕ ವಿರೋಧಿ ಸುಗ್ರೀವಾಜ್ಞೆಗಳ ವಿರುದ್ಧ ಐಕ್ಯ ಹೋರಾಟ ಸಮಿತಿಯು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಹಮ್ಮಿಕೊಂಡಿದ್ದ ಎರಡನೇ ದಿನದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹದಲ್ಲಿ ಆಯೋಜಿಸಿದ್ದ ಜನ ಚಳವಳಿಗಳ ಪರ್ಯಾಯ ಜನತಾ ಅಧಿವೇಶನದಲ್ಲಿ ಅವರು ಮಾತನಾಡುತ್ತಿದ್ದರು.

ಪ್ರತಿಭಟನಾ ಸ್ಥಳಕ್ಕೆ ಇಂದು ವಿಪಕ್ಷ ನಾಯಕ ಸಿದ್ದರಾಮಯ್ಯ, ಜೆಡಿಎಸ್ ಶಾಸಕ ಎಚ್‌.ಡಿ ರೇವಣ್ಣ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಜ್ಯ ಸಮಿತಿಯ ಪ್ರತಿನಿಧಿ ಅಬ್ದುಲ್ ರಝಾಕ್ ಕೆಮ್ಮಾರ ಭೇಟಿ ನೀಡಿ ತಮ್ಮ ಬೆಂಬಲವನ್ನು ಘೋಷಿಸಿದರು. ಜನತಾ ಅಧಿವೇಶನ ನಾಳೆಯೂ ಮುಂದುವರೆಯಲಿದೆ.

ಜನ ಚಳವಳಿಗಳ ಪರ್ಯಾಯ ಜನತಾ ಅಧಿವೇಶನದಲ್ಲಿ ಕೈಗೊಂಡ ನಿರ್ಣಯಗಳು:

1. ಬದುಕಲು ಬೇಕಾದಷ್ಟು ಭೂಮಿ, ಗೌರವದಿಂದ ಬಾಳುವಂತಹ ವಸತಿ ನಮ್ಮ ಜನ್ಮ ಸಿದ್ಧ ಹಕ್ಕು.

1. ಯಾವುದೇ ಕಾರಣಕ್ಕೂ ಬಡ ಜನರನ್ನು( ಕನಿಷ್ಠ ಪರ್ಯಾಯ ವ್ಯವಸ್ಥೆಯನ್ನಾದರೂ ಮಾಡದೆ) ಅವರ ಭೂಮಿಯಿಂದಾಗಲಿ, ಮನೆಯಿಂದಾಗಲಿ ಒಕ್ಕಲೆಬ್ಬಿಸಬಾರದು.

2. ಫಾರಂ 50, 57, 94ಸಿ, 94ಸಿಸಿ ಮತ್ತು ಅರಣ್ಯ ಹಕ್ಕು ಅರ್ಜಿಗಳನ್ನು ನವೆಂಬರ್ ಅಧಿವೇಶನದೊಳಗಾಗಿ ಇತ್ಯರ್ಥಗೊಳಿಸಿ ಬಡ ಜನರಿಗೆ ಹಕ್ಕುಪತ್ರ ನೀಡಬೇಕು.

3. ಒಟ್ಟು ಸರಕಾರಿ ಭೂಮಿಯ ಆಡಿಟಿಂಗ್ ನಡೆಸಬೇಕು. ಲಭ್ಯವಿರುವ ಭೂಮಿಯನ್ನು ನಿವೇಶನಕ್ಕಾಗಿ ಮತ್ತು ಉಳುಮೆಗಾಗಿ ಕೂಡಲೇ ವಿತರಣೆ ಮಾಡಬೇಕು.

4. ರೈತ ವಿರೋಧಿ, ದಲಿತ ವಿರೋಧಿ, ಕಾರ್ಮಿಕ ವಿರೋಧಿ ಸುಗ್ರೀವಾಜ್ಞೆಯನ್ನು ಈ ಕೂಡಲೇ ರದ್ದುಗೊಳಿಸಬೇಕು. ಅಂತಹ ಕಾಯ್ದೆಯ ತಿದ್ದುಪಡಿಯ ಎಲ್ಲಾ ಪ್ರಸ್ತಾಪಗಳನ್ನು ಕೈಬಿಡಬೇಕು.

5. ಭೂಮಿಯು ಉಳುವವರಿಗೆ ಮತ್ತು ವಾಸಿಸುವವರಿಗೆ ಸೇರಿದ್ದು, ಭೂಗಳ್ಳರಿಗಲ್ಲ, ಕಂಪನಿಗಳಿಗಲ್ಲ.

6. ಕೊರೋನಾದಿಂದ ತತ್ತರಿಸುವ ರೈತರ ಮತ್ತು ಕಾರ್ಮಿಕರ ನೆರವಿಗೆ ಸರಕಾರ ಸಮಗ್ರ ಪ್ಯಾಕೇಜ್ ಘೋಷಿಸಬೇಕು.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!