ಮಡಿಕೇರಿಯಲ್ಲಿ ಗೃಹ ಸಚಿವ ಹಾಗೂ ಸಿಟಿ ರವಿ ವಿರುದ್ಧ ಪ್ರತಿಭಟನೆ

Prasthutha|

ಮಡಿಕೇರಿ: ಕರ್ನಾಟಕ ಗೃಹ ಸಚಿವರಾದ  ಆರಗ ಜ್ಞಾನೇಂದ್ರ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ರವರ ಕೋಮು ಪ್ರಚೋದನೆ ಹೇಳಿಕೆಯನ್ನು ಖಂಡಿಸಿ  ಕಾಂಗ್ರೆಸ್ ಪ್ರತಿಭಟನೆ ನಡೆಸಿತು.  ಇನ್ನೂ ಈ ನಾಯಕರುಗಳನ್ನು ಬಂಧಿಸಬೇಕೆಂದು ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಧರ್ಮಜ ಉತ್ತಪ್ಪ ರವರು ಒತ್ತಾಯಿಸಿದರು.  

- Advertisement -

ಆರಗ ಜ್ಞಾನೇಂದ್ರ, ಸಿಟಿ ರವಿ  ಹಾಗೂ ಬಿಜೆಪಿ ಸರಕಾರದ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಕಾರರು ಕೂಡಲೇ ಅವರನ್ನು ಬಂಧಿಸಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಬಳಿಕ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಮಡಿಕೇರಿ ನಗರ ಆರಕ್ಷಕ ಠಾಣೆಗೆ ತೆರಳಿದ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಕೋಮು ಪ್ರಚೋದನೆ ಹೇಳಿಕೆ ಆರಗ ಜ್ಞಾನೇಂದ್ರ , ಸಿಟಿ ರವಿ  ನೀಡಿದ ವಿರುದ್ಧ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿದರು.

ಕೆಪಿಸಿಸಿ ಮಾಧ್ಯಮ ಸಂವಹನ ವಕ್ತಾರರಾದ ಟಿ.ಪಿ ರಮೇಶ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾದ ಕೆಪಿ ಚಂದ್ರಕಲಾ, ಡಿಸಿಸಿ ಉಪಾಧ್ಯಕ್ಷರಾದ ಸುಜು ತಿಮ್ಮಯ್ಯ, ಡಿಸಿಸಿ ಪ್ರಧಾನ ಕಾರ್ಯದರ್ಶಿ ಮುನೀರ್ ಅಹಮದ್, ಡಿಸಿಸಿ ಗೌರವ ಕಾರ್ಯದರ್ಶಿ ವಿಪಿ ಸುರೇಶ್, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹಂಸ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಸುರಯ್ಯ ಅಬ್ರಾರ್, NSUI ಜಿಲ್ಲಾಧ್ಯಕ್ಷ ರೋಷನ್, ಸಾಮಾಜಿಕ ಜಾಲತಾಣ ಜಿಲ್ಲಾಧ್ಯಕ್ಷ ಸೂರಜ್ ಹೊಸೂರು, ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಉಸ್ಮಾನ್, ಡಿಸಿಸಿ ಸದಸ್ಯರ ಲಿಯಾಕತ್ ಆಲಿ ಮೊದಲಾದವರು ಭಾಗವಹಿಸಿದ್ದರು.



Join Whatsapp