ಕೇರಳ ರಾಜ್ಯಪಾಲರ ವಿರುದ್ಧ ಪ್ರತಿಭಟನೆ: SFI ಕಾರ್ಯಕರ್ತರ ಬಂಧನ

Prasthutha|

ತಿರುವನಂತಪುರಂ: ಕೇರಳ ರಾಜ್ಯಪಾಲರ ವಿರುದ್ಧ ಸಿಪಿಐಎಂ ವಿದ್ಯಾರ್ಥಿ ಘಟಕ ಎಸ್‌ಎಫ್‌ಐ ಹಮ್ಮಿಕೊಂಡ ಪ್ರತಿಭಟನೆಯಲ್ಲಿ ಹಿಂಸಾಚಾರ ಸಂಭವಿಸಿದೆ ಎಂದು ವರದಿಯಾಗಿದೆ.

- Advertisement -

ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಉನ್ನತ ಶಿಕ್ಷಣ ಕ್ಷೇತ್ರವನ್ನು ಕೇಸರಿಮಯಗೊಳಿಸಿದ್ದಾರೆ ಎಂದು ಆರೋಪಿಸಿ ಅವರ ಕ್ರಮಗಳ ವಿರುದ್ಧ ಸಿಪಿಐಎಂ ರಾಜ್ಯಾದ್ಯಂತ ಶೈಕ್ಷಣಿಕ ಮುಷ್ಕರವನ್ನು ಘೋಷಿಸಿದ್ದು, ಇದರ ಅಂಗವಾಗಿ ಎಸ್‌ಎಫ್‌ಐ ರಾಜಭವನಕ್ಕೆ ಮೆರವಣಿಗೆ ನಡೆಸಿತ್ತು. ಇದು ಹಿಂಸಾರೂಪಕ್ಕೆ ತಿರುಗಿದೆ ಎನ್ನಲಾಗಿದೆ.

ಹೆಚ್ಚಿನ ಸಂಖ್ಯೆಯಲ್ಲಿದ್ದ ಎಸ್‌ಎಫ್‌ಐ ಕಾರ್ಯಕರ್ತರು ರಾಜಭವನ ರಸ್ತೆಯಲ್ಲಿ ಹಾಕಲಾಗಿದ್ದ ಪೊಲೀಸ್‌ ಬ್ಯಾರಿಕೇಡ್‌ಗಳನ್ನು ದಾಟಿ ಮುಂದೆ ಸಾಗಿದ್ದಾರೆ. ಪೊಲೀಸರು ಎಷ್ಟೇ ತಡೆಯಲು ಪ್ರಯತ್ನಿಸಿದರೂ, ಕಾರ್ಯಕರ್ತರು ರಾಜಭವನದ ಮುಖ್ಯ ದ್ವಾರದ ಬಳಿ ಬಂದು ರಾಜ್ಯಪಾಲ ಖಾನ್‌ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ.

- Advertisement -

ಪ್ರತಿಭಟನೆಯು ಹಿಂಸಾರೂಪ ಪಡೆಯುತ್ತಿರುವಂತೆಯೇ ಪೊಲೀಸರು ಗುಂಪನ್ನು ಚದುರಿಸಲು ಜಲಫಿರಂಗಿ ಬಳಸಿದ್ದಾರೆ. ನಂತರ ಪ್ರತಿಭಟನಕಾರರನ್ನು ಬಂಧಿಸಿದ್ದಾರೆ.
ಕೇರಳದ ವಿವಿಧೆಡೆ ಕೇಂದ್ರ ಸರ್ಕಾರಿ ಕಚೇರಿಗಳ ಮುಂದೆ ಎಸ್‌ಎಫ್‌ಐ ಕಾರ್ಯಕರ್ತರು ಇದೇ ರೀತಿಯ ಪ್ರತಿಭಟನೆಗಳನ್ನು ನಡೆಸಿದ್ದರು.



Join Whatsapp