ಎಂ.ಪಿ. ರೇಣುಕಾಚಾರ್ಯ ಸಹೋದರನಿಗೆ ಪರಿಶಿಷ್ಟ ಮುಖಂಡರ ಮುತ್ತಿಗೆ; ಪೊಲೀಸರ ಸಹಾಯದಿಂದ ಪಲಾಯನ

Prasthutha|

ದಾವಣಗೆರೆ: ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ, ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರ ಸಹೋದರ ಎಂ.ಪಿ. ದಾರಕೇಶ್ವರಯ್ಯ ‘ಬೇಡ ಜಂಗಮ’ ಹೆಸರಿನಲ್ಲಿ ಪರಿಶಿಷ್ಟ ಜಾತಿಯ ಪ್ರಮಾಣಪತ್ರ ಪಡೆದಿರುವುದನ್ನು ಖಂಡಿಸಿ ಪರಿಶಿಷ್ಟ ಸಮುದಾಯದ ಮುಖಂಡರು ಸೋಮವಾರ ದಾರಕೇಶ್ವರಯ್ಯ ಅವರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು. ವಾಗ್ವಾದ ವಿಕೋಪಕ್ಕೆ ತೆರಳಿದಾಗ ಪೊಲೀಸರು ಪ್ರತಿಭಟನಕಾರರಿಂದ ದಾರಕೇಶ್ವರಯ್ಯ ಅವರನ್ನು ರಕ್ಷಿಸಿ ವಾಹನದಲ್ಲಿ ಕರೆದುಕೊಂಡು ಹೋದರು.

- Advertisement -

ಕಾನೂನು ಬದ್ಧವಾಗಿಯೇ ‘ಬೇಡ ಜಂಗಮ’ ಪ್ರಮಾಣ ಪತ್ರ ಪಡೆದುಕೊಂಡಿರುವುದಾಗಿ ದಾರಕೇಶ್ವರಯ್ಯ ಅವರು ಪತ್ರಿಕಾಗೋಷ್ಠಿಯಲ್ಲಿ ಸಮರ್ಥಿಸಿಕೊಂಡು ವರದಿಗಾರರ ಕೂಟದಿಂದ ಹೊರಕ್ಕೆ ಬರುತ್ತಿದ್ದಂತೆ ಪರಿಶಿಷ್ಟ ಸಮುದಾಯದ ಕಾರ್ಯಕರ್ತರು ಅವರನ್ನು ಸುತ್ತುವರಿದು ಘೋಷಣೆಗಳನ್ನು ಕೂಗಿದರು. ಈ ವೇಳೆ ಮಾತಿಗೆ ಮಾತು ಬೆಳೆದು ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿತು. ತಕ್ಷಣವೇ ಮಧ್ಯ ಪ್ರವೇಶಿಸಿದ ಪೊಲೀಸರು, ದಾರಕೇಶ್ವರಯ್ಯ ಅವರನ್ನು ಪ್ರತಿಭಟನಾಕಾರರಿಂದ ಬಿಡಿಸಿಕೊಂಡು ಪೊಲೀಸ್‌ ವಾಹನದ ಒಳಗೆ ಕೂರಿಸಿಕೊಂಡರು.

ವಾಹನ ಮುಂದಕ್ಕೆ ಹೋಗದಂತೆ ತಡೆದ ಪ್ರತಿಭಟನಾಕಾರರು, ತಮ್ಮ ವಶಕ್ಕೆ ಒಪ್ಪಿಸುವಂತೆ ಪೊಲೀಸರೊಂದಿಗೆ ವಾಗ್ವಾದ ನಡೆಸಿದರು. ‘ದಲಿತರ ಹಕ್ಕನ್ನು ಕಿತ್ತುಕೊಂಡು ರೇಣುಕಾಚಾರ್ಯ ಹಾಗೂ ದಾರುಕೇಶ್ವರಯ್ಯ ಅವರನ್ನು ಬಂಧಿಸಬೇಕು’ ಎಂದು ಘೋಷಣೆಗಳನ್ನು ಕೂಗಿದರು.

Join Whatsapp