ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರುದ್ಧ ಬೀದಿಗಿಳಿಯಲು ನಿರ್ಧರಿಸಿರುವ ಕಾಂಗ್ರೆಸ್ ಗ್ರಾಮ ಪಂಚಾಯತ್ ಮಟ್ಟದಿಂದಲೂ 100 (hundred) ನಾಟೌಟ್ ಪ್ರತಿಭಟನೆ ನಡೆಸಲು ಮುಂದಾಗಿದೆ.
ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿರಂತರವಾಗಿ ಏರಿಸುವ ಮೂಲಕ ಕೊರೊನಾದಿಂದ ಸಂಕಷ್ಟದಲ್ಲಿರುವ ಜನರ ಮೇಲೆ ಗದಾ ಪ್ರಹಾರ ಮಾಡುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಪ್ರದೇಶ ಕಾಂಗ್ರೆಸ್ ಸಮಿತಿ ಇಂದು ಶಿವಾನಂದ ವೃತ್ತದ ಪೆಟ್ರೋಲ್ ಬಂಕ್ ಮುಂಭಾಗ 100-ನಾಟೌಟ್ ಹೆಸರಿನಲ್ಲಿ ಪ್ರತಿಭಟನೆ ನಡೆಸಿತು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಸಚಿವರಾದ ಆರ್.ವಿ. ದೇಶಪಾಂಡೆ ಮತ್ತಿತರು ಭಾಗವಹಿಸಿದ್ದರು.