ತೀರ್ಥಹಳ್ಳಿ: ರಾಷ್ಟ್ರಕವಿ ಕುವೆಂಪು ಅವರಿಗೆ ಅಪಮಾನ ಮಾಡಿರುವ ರೋಹಿತ್ ಚಕ್ರತೀರ್ಥ ತೀರ್ಥಹಳ್ಳಿಗೆ ಕಾಲಿಡುವುಡು ಬೇಡ. ಒಂದು ವೇಳೆ ಅವರು ತೀರ್ಥಹಳ್ಳಿಗೆ ಬಂದರೆ ಪ್ರತಿಭಟನೆಯನ್ನು ಎದುರಿಸಬೇಕಾಗುತ್ತದೆ ಎಂದು ವಿವಿಧ ಸಂಘಟನೆಗಳ ಮುಖಂಡರು ಎಚ್ಚರಿಕೆ ನೀಡಿದ್ದಾರೆ.
ಕುವೆಂಪು ಸಾಹಿತ್ಯ ಮತ್ತು ರಾಷ್ಟ್ರೀಯತೆ ವಿಷಯ ಕುರಿತು ಮುಖ್ಯ ಭಾಷಣ ಮಾಡಲು ರೋಹಿತ್ ಚಕ್ರತೀರ್ಥ ತೀರ್ಥಹಳ್ಳಿಗೆ ಭೇಟಿ ನೀಡುತ್ತಿದ್ದಾರೆ. ತೀರ್ಥಹಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಪ್ರಗತಿಪರ ಸಂಘಟನೆಗಳ ಒಕ್ಕೂಟ, ಪಠ್ಯ ಪರಿಷ್ಕರಣೆ ಸಮಿತಿ ಅಧ್ಯಕ್ಷರಾಗಿದ್ದ ರೋಹಿತ್ ಚಕ್ರತೀರ್ಥ ರಾಷ್ಟ್ರ, ರಾಜ್ಯದ ಮಹಾನ್ ವ್ಯಕ್ತಿಗಳಿಗೆ ಅವಮಾನ ಮಾಡಿದ್ದಾರೆ. ಈ ಮೂಲಕ ಸಮಾಜದಲ್ಲಿ ಅಶಾಂತಿ ಮೂಡಿಸುತ್ತಿದ್ದಾರೆ. ಕುವೆಂಪು ಅವರ ಕುರಿತು ಮುಖ್ಯ ಭಾಷಣ ಮಾಡುವ ಅರ್ಹತೆ ಅವರಿಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇನ್ನು ಸಾಮಾಜಿಕ ಜಾಲತಾಣಗಳಲ್ಲಿ ರೋಹಿತ್ ಚಕ್ರತೀರ್ಥ “ಗೋ ಬ್ಯಾಕ್” ಎಂದು ಪೋಸ್ಟ್ ವೈರಲ್ ಆಗುತ್ತಿದೆ.