ನವದೆಹಲಿ: ವಿಪಕ್ಷಗಳ 143 ಸಂಸದರ ಅಮಾನತಿನಲ್ಲಿ ಇರಿಸಿರುವುದನ್ನು ಖಂಡಿಸಿ ವಿಪಕ್ಷಗಳ ‘ಇಂಡಿಯಾ’ ಮೈತ್ರಿಕೂಟದ ನಾಯಕರು ಶುಕ್ರವಾರ (ನಾಳೆ) ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.
ಇದೇ ವೇಳೆ ರಾಷ್ಟ್ರವ್ಯಾಪಿ ಪ್ರತಿಭಟನೆಗೂ ಕರೆ ನೀಡಿದೆ. ಬುಧವಾರ ಕಾಂಗ್ರೆಸ್ ಅಧ್ಯಕ್ಷ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ನಡೆದ ‘ಇಂಡಿಯಾ’ ಬಣದ ನಾಯಕರ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸತ್ತಿನಲ್ಲಿ ಭದ್ರತಾ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಬೇರೆ ಎಲ್ಲಿಯೋ ಮಾತನಾಡಿದ್ದಾರೆ. ಆದರೆ ಸಂಸತ್ತಿನಲ್ಲಿ ಪ್ರತಿಕ್ರಿಯೆ ನೀಡಿಲ್ಲ ಎಂದು ಟೀಕಿಸಿದ್ದಾರೆ.