ಇಂದು ರಾಜ್ಯಾದ್ಯಂತ ಕರ್ನಾಟಕ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ

Prasthutha|

ಬೆಂಗಳೂರು: ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗಕ್ಕಾಗಿ ಆಗ್ರಹಿಸಿ ರಾಜ್ಯಾದ್ಯಂತ ಇಂದು ಕರ್ನಾಟಕ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ ನಡೆಯಲಿದೆ.

- Advertisement -

ಬೆಳಿಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕರವೇಯಿಂದ ಪ್ರತಿಭಟನೆ ನಡೆಸಲಾಗುತ್ತಿದೆ.

ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿಯೂ ಇಂದು ಏಕಕಾಲಕ್ಕೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ ನಡೆಸಲಿದೆ.

- Advertisement -

ಕರ್ನಾಟಕದಲ್ಲಿ ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಕನ್ನಡ ಉದ್ಯೋಗ ಮೀಸಲಾತಿ ಕಲ್ಪಿಸುವಂತ ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಪ್ರತಿಭಟನೆಯನ್ನು ನಡೆಸಲಾಗುತ್ತಿದೆ. ಇತರ ರಾಜ್ಯಗಳಿಂದ ಉದ್ಯೋಗ ಅರಸಿ ಬೆಂಗಳೂರಿಗೆ ಬರುವವರ ಸಂಖ್ಯೆ ಹೆಚ್ಚಾಗಿದೆ. ಇದರಿಂದ ಖಾಸಗಿ ವಲಯದಲ್ಲೂ ಕನ್ನಡೇತರರಿಗೆ ಹೆಚ್ಚಿನ ಉದ್ಯೋಗ ಅವಕಾಶ ನೀಡಲಾಗುತ್ತಿದೆ. ಕನ್ನಡಿಗರಿಗೆ ಕರ್ನಾಟಕದಲ್ಲಿ ಆಗುತ್ತಿರುವಂತ ಅನ್ಯಾಯ ತಪ್ಪಬೇಕು. ಕರ್ನಾಟಕದಲ್ಲಿ ಖಾಸಗಿ ವಲಯದಲ್ಲಿ ಸಿ ಮತ್ತು ಡಿ ದರ್ಜೆಯ ಹುದ್ದೆಗಳನ್ನು ಶೇ.100ರಷ್ಟು ಕನ್ನಡಿಗರಿಗೇ ಮೀಸಲಿರಿಸಬೇಕು ಅಂತ ಆಗ್ರಹಿಸಿ ರಾಜ್ಯಾಧ್ಯಂತ ಕರವೇಯಿಂದ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಕರವೇ ರಾಜ್ಯಾಧ್ಯಕ್ಷ ನಾರಾಯಣ ಗೌಡ ತಿಳಿಸಿದದ್ದರು.

Join Whatsapp