ಯುಪಿ ಭವನದ ಎದುರು CFI ಸೇರಿದಂತೆ ವಿವಿಧ ವಿದ್ಯಾರ್ಥಿ ಸಂಘಟನೆಗಳಿಂದ ಪ್ರತಿಭಟನೆ: ವಿದ್ಯಾರ್ಥಿಗಳನ್ನು ಎಳೆದಾಡಿದ ಪೊಲೀಸರು

Prasthutha|

ನವದೆಹಲಿ: ಮುಸ್ಲಿಮರ ಮನೆಗಳನ್ನು ಅಕ್ರಮವಾಗಿ ಧ್ವಂಸಗೊಳಿಸುತ್ತಿರುವ ಉತ್ತರ ಪ್ರದೇಶದ ಸರ್ಕಾರದ ಕ್ರಮವನ್ನು ವಿರೋಧಿಸಿ ನವದೆಹಲಿಯಲ್ಲಿಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸೇರಿದಂತೆ ವಿವಿಧ ವಿದ್ಯಾರ್ಥಿ ಸಂಘಟನೆಗಳು ಯುಪಿ ಭವನದ ಎದುರು ಬೃಹತ್ ಪ್ರತಿಭಟನೆ ನಡೆಸಿದವು.

- Advertisement -

ಫೆಟರ್ನಿಟಿ ಮೂವ್ ಮೆಂಟ್, ಎಸ್ ಐಒ, ಎಂಎಸ್ ಎಫ್ , ಸಿಎಫ್ಐ ಸೇರಿದಂತೆ ವಿವಿಧ ವಿದ್ಯಾರ್ಥಿ ಸಂಘಟನೆಗಳು ಸದಸ್ಯರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
ವಿವಿಧ ವಿದ್ಯಾರ್ಥಿ ನಾಯಕರು ಭಿತ್ತಿಪತ್ರ ಹಿಡಿದು ಯು.ಪಿ.ಭವನಕ್ಕೆ ಶಾಂತಿಯುತ ಮೆರವಣಿಗೆ ನಡೆಸುತ್ತಿದ್ದಾಗ ಮಾರ್ಗ ಮಧ್ಯೆ ದೆಹಲಿ ಪೊಲೀಸರು, ನಾಯಕರನ್ನು ತಡೆದರು. ಈ ವೇಳೆ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಬಳಿಕ ಪೊಲೀಸರು ವಿದ್ಯಾರ್ಥಿಗಳನ್ನು ಎಳೆದಾಡಿ ವಶಕ್ಕೆ ಪಡೆದರು.
ಪೊಲೀಸರ ಈ ಕೃತ್ಯಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

Join Whatsapp